ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆರೋಗ್ಯ ವಿಚಾರಿಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆರೋಗ್ಯ ವಿಚಾರಿಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆರೋಗ್ಯವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ವಿಚಾರಿಸಿದ್ದಾರೆ

ನಗರದ ಪದ್ಮನಾಭನಗರ ನಿವಾಸಕ್ಕೆ ಡಾ. ವೀರೇಂದ್ರ ಹೆಗ್ಗಡೆಯವರು ಮತ್ತು ಉಪಾಧ್ಯಕ್ಷ ಡಾ. ಸುರೇಂದ್ರ ಕುಮಾರ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ವೀರೇಂದ್ರ ಹೆಗ್ಗಡೆಯವರು ದೇವೇಗೌಡರ ಯೋಗಕ್ಷೇಮ ವಿಚಾರಿಸಿ ಶುಭ ಹಾರೈಸಿದರು.

ಈ ಹಿಂದೆ ನಿರ್ಮಲಾ ಸೀತಾರಾಮನ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿ.ಎಸ್ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತಿತರರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಬಳಿಕ ಮಾಧ್ಯಮ ಬಿಡುಗಡೆ ಮಾಡಿದ್ದ ಹೆಚ್‍ಡಿಡಿ, ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾದ ಕಾರಣಕ್ಕೆ ವೈದ್ಯರು ವಿಶ್ರಾಂತಿಗೆ ಸಲಹೆ ಮಾಡಿದ್ದರು.