ಮಾಜಿ ಸಂಸದ `ಎಲ್.ಆರ್. ಶಿವರಾಮೇಗೌಡ' ಅಧಿಕೃತವಾಗಿ ಬಿಜೆಪಿ ಸೇರ್ಪಡೆ

ಮಾಜಿ ಸಂಸದ `ಎಲ್.ಆರ್. ಶಿವರಾಮೇಗೌಡ' ಅಧಿಕೃತವಾಗಿ ಬಿಜೆಪಿ ಸೇರ್ಪಡೆ

ಬೆಂಗಳೂರು : ಚುನಾವಣೆ ಹೊತ್ತಲ್ಲೇ ಪಕ್ಷಾಂತರ ಪರ್ವ ಶುರುವಾಗಿದ್ದು, ಇಂದು ಮಾಜಿ ಸಂಸದ ಶಿವರಾಮೇಗೌಡ, ಪುತ್ರ ಚೇತನ್ ಗೌಡ ಸೇರಿದಂತೆ ಹಲವು ಪ್ರಮುಖ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಮಾಜಿ ಸಂಸದ ಶಿವರಾಮೇಗೌಡ, ಪುತ್ರ ಚೇತನ್ ಗೌಡ, ಕಲಬುರಗಿ ವೈದ್ಯ ಯೋಗೇಶ್ ಬೆಸ್ತರ್, ರಾಮದುರ್ಗ ಟಿಕೆಟ್ ಆಕಾಂಕ್ಷಿಯಾಗಿದ್ದ ಚಿಕ್ಕರೇವಣ್ಣ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಸಚಿವರಾದ ಡಾ.ಕೆ. ಸುಧಾಕರ್, ಕೆ.ಗೋಪಾಲಯ್ಯ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು