ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ?; ಶ್ರೀರಾಮುಲು ಪ್ರತಿಕ್ರಿಯೆ
ಬಳ್ಳಾರಿ: ಜನಾರ್ಧನ ರೆಡ್ಡಿ ಅವರು ಹೊಸ ಪಕ್ಷ ಕಟ್ಟುವ ವಿಚಾರದ ಕುರಿತಂತೆ ಸಾರಿಗೆ ಸಚಿವ ಬಿ.ಶ್ರೀರಾಮಲು ಪ್ರತಿಕ್ರಿಯೆ ನೀಡಿದ್ದು, ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಕಟ್ಟುವ ಬಗ್ಗೆ ನನ್ನ ಜೊತೆಗೆ ಚರ್ಚಿಸಿಲ್ಲ ಎಂದು ಹೇಳಿದ್ದಾರೆ. ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಕಟ್ಟುವ ವಿಚಾರ ಅವರ ವಿವೇಚನೆಗೆ ಬಿಟ್ಟಿದ್ದು, ರಾಜಕೀಯ ಹೊರತುಪಡಿಸಿ ನಾವಿಬ್ಬರೂ ಒಳ್ಳೆಯ ಸ್ನೇಹಿತರು. ಅವರು ಪಕ್ಷ ಕಟ್ಟಿದರೆ ಅವರಿಗೆ ಒಳ್ಳೆಯದಾಗಲಿ ಎಂದು ಹೇಳಿದ್ದಾರೆ.