ಮಾಜಿ ಸಿಎಂ 'BSY' ಗೆ ಇಂದು 80 ನೇ ವರ್ಷದ ಹುಟ್ಟು ಹಬ್ಬ : ಶಿವಮೊಗ್ಗದಲ್ಲಿ ಕೇಕ್ ಕತ್ತರಿಸಿ ಸಂಭ್ರಮ
ದಾವಣಗೆರೆ : ಮಾಜಿ ಸಿಎಂ ಯಡಿಯೂರಪ್ಪ ( B.S Yadiyurappa ) ಇಂದು 80 ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.
ಬಿಎಸ್ವೈ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗದ ವಿನೋಬ ನಗರದಲ್ಲಿರುವ 7 ನೇ ಕ್ರಾಸ್ ನಲ್ಲಿ ಅವರ ಮನೆಗೆ ಬೆಳಗ್ಗೆಯಿಂದಲೇ ಅಭಿಮಾನಿಗಳು ಶುಭ ಕೋರಲು ಆಗಮಿಸುತ್ತಿದ್ದಾರೆ.
ಶಿವಮೊಗ್ಗದ ಯಡಿಯೂರಪ್ಪ ನಿವಾಸದಲ್ಲಿ ಬೃಹತ್ ಕೇಕ್ ಕತ್ತರಿಸಿ ಜನುಮ ದಿನಾಚರಣೆ ಆಚರಣೆ ಮಾಡಲಾಯಿತು. ಪುತ್ರರಾದ ಬಿ.ವೈ. ರಾಘವೇಂದ್ರ, ಬಿ.ವೈ. ವಿಜಯೇಂದ್ರಗೆ ಕೇಕ್ ತಿನ್ನಿಸಿ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ.
ಯಡಿಯೂರಪ್ಪ ಹುಟ್ಟು ಹಬ್ಬದಂದೇ ವಿಮಾನ ನಿಲ್ದಾಣ ಉದ್ಘಾಟನೆಯಾಗುತ್ತಿರುವುದು ವಿಶೇಷವಾಗಿದೆ. ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಇಂದು ನರೇಂದ್ರ ಮೋದಿ ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಜಿಲ್ಲಾಡಳಿತವು ಸಾರ್ವಜನಿಕರನ್ನು ಸ್ವಾಗತಿಸುತ್ತಿದ್ದು, 1 ಲಕ್ಷ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. 02 ಕಡೆ ಊಟದ ವ್ಯವಸ್ಥೆ ಇದ್ದು ಒಂದೊಂದು ಕಡೆ 100 ಕೌಂಟರ್ಗಳನ್ನು ತೆರೆಯಲಾಗುವುದು. ಕಾರ್ಯಕ್ರಮದ ವೀಕ್ಷಣೆಗೆ 04 ಕಡೆ ವಿಶಾಲವಾದ ಪ್ರಾಜೆಕ್ಟರ್ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಹಾಗೂ ಕಾರ್ಯಕ್ರಮಕ್ಕೆ ಅಗತ್ಯವಾದ ಎಲ್ಲ ಸಿದ್ದತೆಗಳೊಂದಿಗೆ ಸೂಕ್ತ ಪೊಲೀಸ್ ಬಂಧೋಬಸ್ತ್ ಮಾಡಲಾಗಿದೆ.