ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ವಿಜಯಮ್ಮ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಧರ್ಮಪತ್ನಿ ವಿಜಯಮ್ಮ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
'ರಮೇಶ್ ಕುಮಾರ್ ಅವರಿಗೆ ಪತ್ನಿ ವಿಯೋಗದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ.
ಅವರ ಆತ್ಮಕ್ಕೆ ಸದ್ಗತಿ ಸಿಗಲಿ. ಈ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಆ ಭಗವಂತ ರಮೇಶ್ ಕುಮಾರ್ ಹಾಗೂ ಅವರ ಕುಟುಂಬದ ಸದಸ್ಯರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.