ಮಾ.11ರಂದು 'ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ' ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ
ಬೆಂಗಳೂರು: ಬಹು ನಿರೀಕ್ಷಿತ ಬೆಂಗಳೂರು - ಮೈಸೂರು ಎಕ್ಸ್ ಪ್ರೆಸ್ ವೇ ರಸ್ತೆಯ ಉದ್ಘಾಟನೆಗೆ ಡೇಟ್ ಫಿಕ್ಸ್ ಆಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 11ರಂದು ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯನ್ನು ಉದ್ಘಾಟಿಸಲಿದ್ದಾರೆ.
ಮಾರ್ಚ್ 11ರಂದು ಎಕ್ಸ್ ಪ್ರೆಸ್ ವೇಯನ್ನು ರಾಮನಗರ ಬಳಿ ಹೆದ್ದಾರಿಗೆ ಹೊಂದಿಕೊಂಡಂತೆ ನಿರ್ಮಾಣವಾಗಿರುವ ಹೆಲಿಪ್ಯಾಡ್ ನಲ್ಲಿ ಇಳಿದು, ಮದ್ದೂರಿನವರೆಗೆ ಪ್ರಧಾನಿ ಮೋದಿ ಎಕ್ ಪ್ರೇಸ್ ವೇನಲ್ಲಿ ಪ್ರಯಾಣಿಸಲಿದ್ದಾರೆ. ಅಲ್ಲಿ ನಿಗದಿಯಾಗಿರುವಂತ ಕಾರ್ಯಕ್ರಮದಲ್ಲಿ ಉದ್ಘಾಟಿಸಲಿದ್ದಾರೆ.
ಈ ಬಗ್ಗೆ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದು, ಮಾರ್ಚ್ 11ರಂದು ಮೋದಿ ಅವರು ಭರ್ಜರಿ ರೋಡ್ ಶೋಗೆ ಸಿದ್ಧತೆ ನಡೆಸಲಾಗಿದೆ. ಈ ಬಳಿಕ ಮದ್ದೂರು ಬಳಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೇ ಹೊಸ ಹೆದ್ದಾರಿ ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇಯನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.