ಮಾ.21ಕ್ಕೆ ತಪ್ಪದೇ ವಿಚಾರಣೆಗೆ ಹಾಜರಾಗಬೇಕು: ಮಾಜಿ ಸಿಎಂ ಕುಮಾರಸ್ವಾಮಿಗೆ ಕೋರ್ಟ್ ಸೂಚನೆ

ಮಾ.21ಕ್ಕೆ ತಪ್ಪದೇ ವಿಚಾರಣೆಗೆ ಹಾಜರಾಗಬೇಕು: ಮಾಜಿ ಸಿಎಂ ಕುಮಾರಸ್ವಾಮಿಗೆ ಕೋರ್ಟ್ ಸೂಚನೆ

ಬೆಂಗಳೂರು: ಹಲಗೇ ವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಮಾರ್ಚ್ 21ರಂದು ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಸೂಚಿಸಿದೆ.

ಇಂದು ಪ್ರಕರಣದ ವಿಚಾರಣೆ ನಡೆಸಿದಂತ ವೇಳೆಯಲ್ಲಿ ಪದೇ ಪದೇ ವಿಚಾರಣೆ ವೇಳೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಗೈರು ಹಾಜರಿ ಬಗ್ಗೆ ಅಸಮಾಧನ ವ್ಯಕ್ತ ಪಡಿಸಿತು.

ಈ ವೇಳೆ ಹಾಜರಾತಿಗೆ ವಿನಾಯ್ತಿ ನೀಡುವಂತೆ ಕುಮಾರಸ್ವಾಮಿ ಪರ ವಕೀಲರು ಮನವಿ ಮಾಡಿದರು.

ಈ ಮನವಿ ಪರಿಗಣಿಸಿದಂತ ಜನಪ್ರತಿನಿಧಿಗಳ ನ್ಯಾಯಾಲಯವು, ಮುಂದಿನ ವಿಚಾರಣೆ ವೇಳೆ ತಪ್ಪದೇ ಹೆಚ್ ಡಿ ಕುಮಾರಸ್ವಾಮಿಯವರು ಹಾಜರಿರಲಿದ್ದಾರೆ ಎಂಬುದಾಗಿ ಹೇಳಿದರು. ಈ ಹಿನ್ನಲೆಯಲ್ಲಿ ವಿಚಾರಣೆಯನ್ನು ಮಾರ್ಚ್ 21ಕ್ಕೆ ಮುಂದೂಡಿತು.

ಅಂದಹಾಗೇ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಚಾಮರಾಜನಗರದ ಎಸ್ ಮಹದೇವಸ್ವಾಮಿ ಎಂಬುವರು ಹಲಗೇವಡೇರಹಳ್ಳಿ ಡಿನೋಟಿಫಿಕೇಷನ್ ಸಂಬಂಧ ಖಾಸಗಿ ದೂರು ದಾಖಲಿಸಿದ್ದರು. ಈ ದೂರಿನ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಸಮನ್ಸ್ ಜಾರಿಗೊಳಿಸಿತ್ತು. ಆದ್ರೇ ವಿಚಾರಣೆಗೆ ನಿರಂತರವಾಗಿ ಗೈರು ಹಾಜರಿದ್ದರು. ಇಂದು ವಿಚಾರಣೆ ವೇಳೆಯಲ್ಲಿ ಮುಂದಿನ ವಿಚಾರಣೆ ವೇಳೆ ತಪ್ಪದೇ ಹಾಜರಿಗೆ ಕೋರ್ಟ್ ಸೂಚನೆ ನೀಡಿದೆ.