ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧಾರ : ಈ ಕುರಿತು ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದ್ದೇನು..?

ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧಾರ : ಈ ಕುರಿತು ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದ್ದೇನು..?

ಬೆಂಗಳೂರು : ವರ್ಗದ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ 15 ರಿಂದ ಶೇ 17 ಕ್ಕೆ ಹಾಗೂ ST ವರ್ಗದ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ 3 ರಿಂದ 7 ಕ್ಕೆ ಹೆಚ್ಚಳ ಮಾಡಲು ನಿರ್ಧರಿಸಿರುವ ಸರ್ವಪಕ್ಷ ಸಭೆಯ ತೀರ್ಮಾನವನ್ನು ನಾನು ಸ್ವಾಗತಿಸುತ್ತೇನೆ ಎಂದು ಮಾಜಿ ಸಚಿವ ಹೆಚ್.ಸಿ ಮಹಾದೇವಪ್ಪ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿದ ಹೆಚ್.ಸಿ ಮಹಾದೇವಪ್ಪ ಒಂದು ಟ್ವೀಟ್ ನಲ್ಲಿ 'ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಧಿಕಾರದಲ್ಲಿದ್ದಾಗ SC/ST ಸಮುದಾಯದ ಜನ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು ಎಂಬ ಕಾರಣಕ್ಕಾಗಿ ಜಸ್ಟೀಸ್ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಯಿತು ಎಂದಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ terms of reference ಅನ್ನು ಹಾಕಿದ ನಂತರದಲ್ಲಿ ಜಸ್ಟೀಸ್ ನಾಗಮೋಹನ್ ದಾಸ್ ಅವರು ಇಡೀ ರಾಜ್ಯವನ್ನು ಪ್ರವಾಸ ಮಾಡಿ, ವಸ್ತು ನಿಷ್ಠವಾದ ವರದಿಯನ್ನು ಸಿದ್ದಪಡಿಸಿ ಅದನ್ನು ಸರ್ಕಾರಕ್ಕೆ ಸಲ್ಲಿಸಿದರು. ನಂತರ ಈ ವರದಿಯನ್ನು ಮತ್ತೊಮ್ಮೆ ಕೂಲಂಕುಷವಾಗಿ ವಿಶ್ಲೇಷಣೆ ಮಾಡಿ ಅದನ್ನು ಜಾರಿಗೊಳಿಸುವ ಹೊತ್ತಿಗೆ ಸರ್ಕಾರ ಬದಲಾಯಿತು ಎಂದಿದ್ದಾರೆ.

ಇನ್ನೊಂದು ಟ್ವೀಟ್ ನಲ್ಲಿ SC ವರ್ಗದ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ 15 ರಿಂದ ಶೇ 17 ಕ್ಕೆ ಹಾಗೂ ST ವರ್ಗದ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ 3 ರಿಂದ 7 ಕ್ಕೆ ಹೆಚ್ಚಳ ಮಾಡಲು ನಿರ್ಧರಿಸಿರುವ ಸರ್ವಪಕ್ಷ ಸಭೆಯ ತೀರ್ಮಾನವನ್ನು ನಾನು ಸ್ವಾಗತಿಸುತ್ತೇನೆ ಎಂದಿದ್ದಾರೆ.