ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ' : 'BSY' ನಿರ್ಧಾರ ಸ್ವಾಗತಿಸಿದ ಎಸ್.ಎಂ ಕೃಷ್ಣ

ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಮಾತೇ ಇಲ್ಲ, ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುವೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಇದೀಗ ಯಡಿಯೂರಪ್ಪ ನಿರ್ಧಾರವನ್ನು ಮಾಜಿ ಸಿಎಂ ಎಸ್ ಎಂ ಕೃಷ್ಣ ಸ್ವಾಗತಿಸಿದ್ದಾರೆ.
ರಾಜ್ಯದ ಎಲ್ಲಾ ಸಮುದಾಯಗಳ ಏಳಿಗೆಗೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದೀರಿ , ರಾಜ್ಯದ ಜನರಿಗೆ ನಿಮ್ಮ ಸೇವೆ ಬೇರೆ ರೂಪದಲ್ಲಿ ದೊರೆಯಲಿ ಎಂದು ಹೇಳಿದ್ದಾರೆ.
ಯಡಿಯೂರಪ್ಪ ವಿದಾಯದ ಭಾಷಣ
ವಿಧಾನಸೌಧದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ತರಲು ಪ್ರಯತ್ನಿಸಲಾಗುವುದು. ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುವೆ ಎಂದು ಹೇಳಿದ್ದಾರೆ.
ನಮ್ಮೆಲ್ಲರಿಗೂ ಹೆಚ್.ದೇವೇಗೌಡರೇ ಆದರ್ಶವಾಗಿದ್ದಾರೆ. ಇದು ನನ್ನ ಕೊನೆಯ ಅಧಿವೇಶನ. ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೇ ಮಾಡುವ ಮಾತೇ ಇಲ್ಲ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಪ್ರಯತ್ನ ನಡೆಸುತ್ತೇನೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಸ್ಪೀಕರ್ ಕಾಗೇರಿ ಅವರನ್ನು ಬಿ.ಎಸ್ ಯಡಿಯೂರಪ್ಪ ಹಾಡಿಹೊಗಳಿದ್ದಾರೆ. ಸಭಾಧ್ಯಕ್ಷರಾಗಿ ಸದನ ನಡೆಸಿದ ರೀತಿ ಎಲ್ಲರೂ ಮೆಚ್ಚವಂತದ್ದೂ. ಮುಂದಿನ ಚುನವಾಣೆಯಲ್ಲಿ ಸ್ಪೀಕರ್ ಪೀಠದಲ್ಲಿ ಕೂರದೇ ಸಚಿವರಾಗಿ. ಇದನ್ನು ನಾನು ಸಿಎಂಗೆ ಮನವಿ ಮಾಡುತ್ತೇನೆ ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸ್ಪೀಕರ್ ಕಾಗೇರಿ ಅವರು ಬಿಎಸ್ ಯಡಿಯೂರಪ್ಪ ಅವರಿಗೆ ಧನ್ಯವಾದ ತಿಳಿಸಿದ್ದಾರೆ.