ಮುಂದಿನ 24 ಗಂಟೆಯಲ್ಲಿ ರಾಜ್ಯದ ಹಲವು ಕಡೆ ಭಾರೀ 'ಮಳೆ' : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ನ.22 ರಿಂದ ರಾಜ್ಯದಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ., ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳುರು. ಬೆಂಗಳೂರು, ಬೆಂ ಗ್ರಾಮಾಂತರ, ಮಂಡ್ಯ, ರಾಮನಗರ. ಮೈಸೂರು. ತುಮಕೂರು, ವಿಜಯಪುರ ಸೇರಿ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನೂ, ರಾಜ್ಯದಲ್ಲಿ ಚಳಿ ಕೂಡ ಜಾಸ್ತಿಯಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಬೆಳಗ್ಗೆ ಭಾರೀ ಚಳಿಯ ಅನುಭವ ಉಂಟಾಗಿದೆ