ಮುಂದಿನ 25 ವರ್ಷಗಳ ದೃಷ್ಟಿಕೋನದಲ್ಲಿ ಬಜೆಟ್: ನಿರ್ಮಲಾ ಸೀತಾರಾಮನ್

ಮುಂದಿನ 25 ವರ್ಷಗಳ ದೃಷ್ಟಿಕೋನದಲ್ಲಿ ಬಜೆಟ್: ನಿರ್ಮಲಾ ಸೀತಾರಾಮನ್

ದೇಶದ ಮುಂದಿನ 25 ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಸಿದ್ದಪಡಿಸಲಾಗುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ "ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ & ಇಂಡಸ್ಟ್ರೀಯ"(FICCI) 95ನೇ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಪಶ್ಚಾತ್ಯ ದೇಶಗಳು ಆರ್ಥಿಕ ಹಿಂಜರಿತ ಎದುರಿಸುತ್ತಿರುವ ಈ ವೇಳೆ ಭಾರತ ಉತ್ಪಾದನೆಗೆ ವೇದಿಕೆಯಾಗಿದೆ. ಅದಕ್ಕೆ ತಕ್ಕಂತೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ಹೇಳಿದ್ದಾರೆ.