ಮುಂಬೈ-ಗೋವಾ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : 9 ಮಂದಿ ಸ್ಥಳದಲ್ಲೇ ಸಾವು

ಮುಂಬೈ-ಗೋವಾ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : 9 ಮಂದಿ ಸ್ಥಳದಲ್ಲೇ ಸಾವು

ಮುಂಬೈ : ಮುಂಬೈ-ಗೋವಾ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇಂದು ಬೆಳಿಗ್ಗೆ ಮುಂಬೈ-ಗೋವಾ ಹೆದ್ದಾರಿಯಲ್ಲಿ ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ 9 ಮಂದಿ ಸ್ಥಳದಲ್ಲೇ ಮೃತಪಟ್ಟರೆ, 4 ವರ್ಷದ ಮಗು ಗಂಭೀರವಾಗಿ ಗಾಯಗೊಂಡಿದೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯಗಳನ್ನು ಪ್ರಾರಂಭಿಸಿದರು. ಸ್ಥಳೀಯರ ಸಹಾಯದಿಂದ ಗಾಯಗೊಂಡ ಮಗುವನ್ನು ಕಾರಿನಿಂದ ಹೊರತೆಗೆದು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತದ ಕಾರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.