ಮುಖ್ಯಮಂತ್ರಿಗಳು ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು : ಬಂಡೆಪ್ಪ ಖಾಶೆಂಪುರ್
ಬೀದರ್ (ಡಿ.18): ಬೆಳಗಾವಿ ನಗರದಲ್ಲಿ ಕೆಲ ಪುಂಡರು ಪುಂಡಾಟಿಕೆ ನಡೆಸಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಮೂರ್ತಿಯನ್ನು ವಿರೂಪಗೊಳಿಸಿದ್ದಾರೆ ಹಾಗೂ ಸರ್ಕಾರಿ ವಾಹನಗಳು ಸೇರಿದಂತೆ ಅನೇಕ ವಾಹನಗಳನ್ನು ಜಖಂಗೊಳಿಸಿದ್ದಾರೆ.
ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಖಾಶೆಂಪುರ್ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪುಂಡರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈಗಾಗಲೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರವರ ಮೂರ್ತಿ ವಿರೂಪಗೊಳಿಸಿದ್ದಾರೆ. ಸರ್ಕಾರಿ ವಾಹನಗಳನ್ನು ಜಖಂಗೊಳಿಸಿದ್ದಾರೆ. ಅಂಥ ಪುಂಡರನ್ನು ಗುರುತಿಸಿ ಬಂಧಿಸಬೇಕು. ಅವರ ಮೇಲೆ ಕೂಡಲೇ ಕಠಿಣ ಕ್ರಮಕೈಗೊಳ್ಳಬೇಕು.
ಮುಖ್ಯಮಂತ್ರಿಗಳು ಕೂಡಲೇ ಸರ್ಕಾರದಿಂದಲೇ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣರವರ ನೂತನ ಮೂರ್ತಿಯನ್ನು ಸ್ಥಾಪಿಸಿಬೇಕು. ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು. ಪುಂಡರ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ದುಷ್ಕೃತ್ಯದಲ್ಲಿ ಪಾಲ್ಗೊಂಡವರ ಮೇಲೆ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಆಗ್ರಹಿಸಿದರು.