ಮುರುಘಾ ಮಠ ಅಧೀನ ಸಂಸ್ಥೆ ನಿರ್ದೇಶಕರಾಗಿ ಉದ್ಯಮಿ ಭರತ್ ನೇಮಕ
ಚಿತ್ರದುರ್ಗ ಮುರುಘಾ ಮಠದ ಅಧೀನ ಸಂಸ್ಥೆಯಾಗಿರುವ ಎಸ್ಜೆಎಂ ವಿದ್ಯಾಪೀಠದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭರತ್ ಅವರನ್ನು ನೇಮಕ ಮಾಡಲಾಗಿದೆ. ವಿದೇಶದಲ್ಲಿ ಕಾರ್ಯ ನಿರ್ವಹಿಸಿರುವ ಚಿತ್ರದುರ್ಗ ಮೂಲದ ಉದ್ಯಮಿ ಭರತ್ ಕುಮಾರ್ ಅವರು ಮುರುಘಾ ಮಠದ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಮುರುಘಾಮಠದ ಪೂಜಾ ಕೈಂಕರ್ಯ ಉಸ್ತುವಾರಿ ಬಸವಪ್ರಭು ಶ್ರೀಗಳು, ಎಸ್ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಬಿ.ವಸ್ತ್ರದಮಠ ಉಪಸ್ಥಿತರಿದ್ದರು.