ಮುರುಘಾ ಶ್ರೀ ಪ್ರಕರಣ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ ನೋಟಿಸ್ ಜಾರಿ

ಚಿತ್ರದುರ್ಗ : ಚಿತ್ರದುರ್ಗದ ಮುರುಘರಾಜೇಂದ್ರ ಮಠದ ಶಿವಮೂರ್ತಿ ಶರಣರ ಪ್ರಕರಣ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಪೋಕ್ಸೊ ಪ್ರಕರಣದಲ್ಲಿ ಹಿರಿಯ ಮಠಾಧೀಶರ ವಿರುದ್ಧ ಷಡ್ಯಂತ್ರ ರೂಪಿಸಿದ ಆರೋಪ ಸಂಬಂಧ ಅವರು ನೀಡಿದ ದೂರಿನ ತನಿಖೆಯನ್ನು ಹಿರಿಯ ಮಹಿಳಾ ಪೊಲೀಸ್ ಅಧಿಕಾರಿಗೆ ವಹಿಸಲು ನಿರ್ದೇಶನ ನೀಡುವಂತೆ ಅರ್ಜಿದಾರರು ಕೋರಿದ್ದಾರೆ.
ತಾನು ನೀಡಿದ ದೂರಿನಲ್ಲಿ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ವೃತ್ತಿಪರವಲ್ಲದ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ಅರ್ಜಿದಾರರು ವಾದಿಸಿದ್ದಾರೆ. ಹಿರಿಯ ಶ್ರೀಗಳಾದ ಶಿವಮೂರ್ತಿ ಮುರುಘಾ ಶರಣರನ್ನು ಸುಳ್ಳು ಆರೋಪದಲ್ಲಿ ಸಿಲುಕಿಸಲು ಶ್ರೀಗಳು ಆರೋಪ ಮಾಡಿರುವ ಮಾಜಿ ಶಾಸಕರೊಬ್ಬರನ್ನು ರಕ್ಷಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.