ಮೇಕೆದಾಟು ಯೋಜನೆ ಆಗ್ರಹಿಸಿ ರೈತರ ಪ್ರತಿಭಟನೆ : ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ

ಮೇಕೆದಾಟು ಯೋಜನೆ ಆಗ್ರಹಿಸಿ ರೈತರ ಪ್ರತಿಭಟನೆ : ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ

ರಾಮನಗರ: ಕನಕಪುರ ತಾಲೂಕಿನ ಮೇಕೆದಾಟು ಬಳಿ ಇಂದು ರೈತರು ಪ್ರತಿಭಟನೆ ನಡೆಸಲು ಮುಂದಾಗಿದೆ.

ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ತಹಶೀಲ್ದಾರ್ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಜನವರಿ 31ರಂದು ಮೇಕೆದಾಟು ಯೋಜನೆ ಆಗ್ರಹಿಸಿ ದೆಹಲಿ ಚಲೋ ಮಾಡಲು ನಿರ್ಧರಿಸಲಾಗಿತ್ತು.ಇಂದು ಕೇಂದ್ರಕ್ಕೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್​ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಮೇಕೆದಾಟು ಹೋರಾಟಗಾರರ ಸಮಿತಿ ಹೇಳಿದ್ದರು.

ಈ ವೇಳೆ ರಾಷ್ಟ್ರಪತಿಯವರನ್ನು ಭೇಟಿಯಾಗಿ ಮನವಿ ಪತ್ರ ಕೂಡ ನೀಡಲಾಗಿದೆ. ಈ ಬೆನ್ನಲ್ಲೆ ಇಂದು ಮೇಕೆದಾಟು ಸಂಗಮದ ಬಳಿ ರೈತ ಸಂಘಟನೆಗಳಿಂದ ಪ್ರತಿಭಟನೆಗೆ ಮುಂದಾಗಿದೆ.