ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಶಾಸಕರ ಕುರಿತು ಮಾಜಿ ಸಿಎಂ `HDK' ಹೊಸ ಬಾಂಬ್

ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಶಾಸಕರ ಕುರಿತು ಮಾಜಿ ಸಿಎಂ `HDK' ಹೊಸ ಬಾಂಬ್

ನಾಗಮಂಗಲ : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಶಾಸಕರ ಕುರಿತಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದು, 15 ದಿನಗಳ ಕಾಲ ಕಾದರೆ ಎಷ್ಟು ಜನ ಮತ್ತೆ ಕಾಂಗ್ರೆಸ್ ಗೆ ಹೋಗಲಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.

ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಸುರೇಶ್ ಗೌಡ ಪರ ಪ್ರಚಾರ ನಡೆಸಿದ ಅವರು, ಇನ್ನು 15 ದಿನಗಳ ಕಾಲ ಕಾದರೆ ನನಗೆ ಟೋಪಿ ಹಾಕಿ ಹೋದ 17 ಮಂದಿಯ ಪೈಕಿ ಎಷ್ಟು ಜನ ಮತ್ತೆ ಕಾಂಗ್ರೆಸ್ ಹೋಗಲಿದ್ದಾರೆ ಎಂಬುದು ಗೊತ್ತಾಗಲಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ನಮಗೆ ಟೋಪಿ ಹಾಕಿ ಹೋದ 17 ಶಾಸಕರ ಪೈಕಿ ಎಷ್ಟು ಜನ ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬುದು 15 ದಿನ ಕಾಯಿರಿ ಎಂದು ಹೇಳುವ ಮೂಲಕ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಕೆಲವರು ಮತ್ತೆ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.