ಮೈಸೂರಿನಲ್ಲಿ ಹೆಚ್ಚಿದ ಕಾಡಾನೆಗಳ ಉಪಟಳ : ರಾಗಿ, ಕಬ್ಬಿನ ಬೆಳೆನಾಶ
ಮೈಸೂರು: ಮೈಸೂರಿನಲ್ಲಿ ಚಿರತೆ ಹಾವಳಿ ಬೆನ್ನಲೇ ಕಾಡಾನೆಗಳು ಪ್ರತ್ಯಕ್ಷವಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.
ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ನುಗು ಹಿನ್ನೀರಿನಲ್ಲಿ ಕಾಡಾನೆಗಳು ಪ್ರತ್ಯಕ್ಷವಾಗಿವೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅರಣ್ಯಾಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆಗಳನ್ನ ಸೆರೆಹಿಡಿಯುವಂತೆ ಒತ್ತಾಯಿಸಿದ್ದಾರೆ. ಹೀಗಾಗಿ ಆನೆಗಳನ್ನು ಕಾಡಿಗೆ ಕಳುಹಿಸಲು ಅರಣ್ಯ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.