ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇನಲ್ಲಿ ಇನ್ಮುಂದೆ ಕ್ಯಾಮೆರಾ ಕಣ್ಣು

ದಶಪಥಗಳ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇನಲ್ಲಿ ಇಂಟಲಿಜೆನ್ಸ್ ಟ್ರಾನ್ಸ್‌ಪೋರ್ಟ್ ವ್ಯವಸ್ಥೆ ಜಾರಿಗೆ ಬರಲಿದ್ದು, ಇಡೀ ಸಂಚಾರ ವ್ಯವಸ್ಥೆ ಮೇಲೆ ಅತ್ಯಾಧುನಿಕ ಕ್ಯಾಮೆರಾಗಳು ಕಣ್ಣಿಡಲಿವೆ. ಒಟ್ಟು 118 ಕಿ.ಮೀ. ಉದ್ದದ ಹೆದ್ದಾರಿಯಲ್ಲಿ ಪ್ರತಿ 500 ಮೀ.ಗೆ ಒಂದರಂತೆ ಕ್ಯಾಮೆರಾ ಅಳವಡಿಕೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ. ಈ ಕ್ಯಾಮೆರಾಗಳನ್ನು ಬಳಸಿ ಹೆದ್ದಾರಿಯಲ್ಲಿನ ಚಟುವಟಿಕೆಗಳನ್ನು ಕುಳಿತಲ್ಲೇ ವೀಕ್ಷಿಸಲು ಸಾಧ್ಯವಾಗಲಿದೆ.