ಮೋದಿ' ಅಂತ ಹೆಸರಿದ್ದವರೆಲ್ಲ ಕಳ್ಳರೇ.! ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೊಸ ವಿವಾದ
ಕಳ್ಳರೆಲ್ಲರಿಗೂ ಮೋದಿ ಎಂಬ ಉಪ ನಾಮ ಏಕಿರುತ್ತದೆ ಎಂದು ಕರ್ನಾಟಕದ ಕೋಲಾರದಲ್ಲಿ ನಡೆದಿದ್ದ ಸಭೆ ಒಂದರಲ್ಲಿ ಹೇಳಿದ್ದ ಕಾರಣಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸೂರತ್ ನ್ಯಾಯಾಲಯದಿಂದ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ನೀಡಲಾಗಿದ್ದು, ಈ ಕಾರಣಕ್ಕಾಗಿಯೇ ಸಂಸತ್ ಸದಸ್ಯತ್ವವನ್ನೂ ಕಳೆದುಕೊಂಡಿದ್ದಾರೆ.
ಇದೀಗ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್, ರಾಹುಲ್ ಗಾಂಧಿಯವರ ಹೇಳಿಕೆಯನ್ನೇ ಪುನರುಚ್ಚರಿಸಿದ್ದು, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದಿದ್ದ ಸಭೆಯಲ್ಲಿ, ಮೋದಿ ಅಂತ ಹೆಸರು ಇಟ್ಟುಕೊಂಡವರೆಲ್ಲರೂ ಕಳ್ಳರೇ. ಈ ಬಗ್ಗೆ ಕೇಸ್ ಹಾಕಿದರೂ ನಾನು ಹೆದರುವುದಿಲ್ಲ ಎಂದು ಹೇಳಿದ್ದಾರೆ ಇದು ಮಾಧ್ಯಮಗಳಲ್ಲಿಯೂ ಪ್ರಸಾರವಾಗಿದೆ.
ಮಹಮ್ಮದ್ ನಲಪಾಡ್ ಅವರ ಈ ಹೇಳಿಕೆಯನ್ನು ಉಲ್ಲೇಖಿಸಿ ಈಗ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆ.ಬಿ. ಪ್ರದೀಪ್ ಎಂಬವರು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಲ್ಲದೆ ನಲಪಾಡ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.