ಮ್ಯಾಂಡಸ್ ಅಬ್ಬರ; ಈ ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮ್ಯಾಂಡಸ್ ಅಬ್ಬರ; ಈ ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಾಂಡೌಸ್ ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುತ್ತಿದ್ದು, ಮಳೆ ಹಿನ್ನೆಲೆಯಲ್ಲಿ ಇಂದು ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕೋಲಾರ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ, ಅದೇ ರೀತಿ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಎನ್ ಎಂ ನಾಗರಾಜ್ ಆದೇಶ ಹೊರಡಿಸಿದ್ದಾರೆ.