ಯಾದಗಿರಿಯಲ್ಲಿ ʼಕಲುಷಿತ ನೀರುʼ ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆ ಸಾವು

ಯಾದಗಿರಿಯಲ್ಲಿ ʼಕಲುಷಿತ ನೀರುʼ ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆ ಸಾವು

ಲಬುರಗಿ : ಕಲುಷಿತ ನೀರು ಸೇವಿಸಿದ ಅಸ್ವಸ್ಥಗೊಂಡಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲೆಯ ಅನಪುರಗ್ರಾಮದಲ್ಲಿ ನಡೆದಿದ್ದು ಬೆಳಕಿಗೆ ಬಂದಿದೆ.ಕುಡಿಯುವ ನೀರಿನ ಪೈಪ್‌ನಲ್ಲಿ ಚರಂಡಿ ನೀರು ಸೇರಿತ್ತು . ನೀರು ಸೇವಿಸಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಇಂದು ಚಿಕಿತ್ಸೆ ಫಲಿಸದೆ ಸಾವಿತ್ರಮ್ಮ(35) ಮೃತಪಟ್ಟಿದ್ದಾರೆ. ಅಸ್ವಸ್ಥರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈಗಾಗಲೇ ಘಟನಾ ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಕ್ರಮ ಕೈಗೊಳ್ಳಲಿದ್ದಾರೆ . ಕಲುಷಿತ ನೀರು ಸೇವಿಸಿದ ಅಸ್ವಸ್ಥಗೊಂಡಿದ್ದ ಮಹಿಳೆ ಸಾವನ್ನಪ್ಪಿದ ಕುಟುಂಬಸ್ಥರಲ್ಲಿ ಅಕ್ರಂಧನ ಮುಗಿಲು ಮುಟ್ಟಿದೆ.