ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ ನಡೆಸಿದ ದಂಪತಿ

ಚಿಂಚಲಿ: ಕಲ್ಲೂರ ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ ಅಭಿವೃದ್ಧಿಗೆ ಮುಂದಾಗಬೇಕೆಂದು ಆಗ್ರಹಿಸಿ ಚನ್ನಬಸಯ್ಯ ಹಿರೇಮಠ ದಂಪತಿ ಇಲ್ಲಿನ ಗ್ರಾ.ಪಂ. ಎದುರು ಧರಣಿ ಸತ್ಯಾಗ್ರಹ ನಡೆಸಿದರು. ನಮ್ಮ ಮನೆಗೆ 30 ವರ್ಷಗಳಿಂದ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಒತ್ತುವರಿಯಾಗಿ ಕಟ್ಟಡ ನಿರ್ಮಾಣವಾಗಿದೆ. ಸುಗಮ ರಸ್ತೆ ಇಲ್ಲದೆ ನಿತ್ಯ ಸಮಸ್ಯೆ ಎದುರಿಸುತ್ತಿದ್ದೇವೆ. ರಸ್ತೆ ಅಭಿವೃದ್ಧಿ ಮಾಡುವಂತೆ ಗ್ರಾ.ಪಂ., ವಾರ್ಡ್ ಸದಸ್ಯರಿಗೆ ಮನವಿ ಸಲ್ಲಿಸಿದರೂ, ಪ್ರಯೋಜನವಿಲ್ಲ ಎಂದಿದ್ದಾರೆ ಚೆನ್ನಬಸಯ್ಯ ಹಿರೇಮಠ.