ರಾಜಕೀಯ ನಿವೃತ್ತಿ ಪಡೆಯುವ ಸುಳಿವು ನೀಡಿದ ಸೋನಿಯಾ ಗಾಂಧಿ
ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸದ್ಯದಲ್ಲೇ ತಾವು ರಾಜಕೀಯ ನಿವೃತ್ತಿ ಪಡೆಯುವ ಸುಳಿವು ನೀಡಿದ್ದಾರೆ. ಛತ್ತೀಸ್ಗಡದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಮಹಾಅಧಿವೇಶನದಲ್ಲಿ ಮಾತನಾಡುವ ವೇಳೆ ಸೋನಿಯಾ ಈ ಕುರಿತು ಮಾತನಾಡಿದ್ದಾರೆ.
ಕಾಂಗ್ರೆಸ್ ಭಾರತ ಐಕ್ಯತಾ ಯಾತ್ರೆ ಪಕ್ಷದ ಪಾಲಿಗೆ ದೊಡ್ಡ ತಿರುವು ನೀಡಲಿದ್ದು, ಇಂತಹ ಮಹತ್ವದ ಯಾತ್ರೆಯ ಮೂಲಕ ನನ್ನ ರಾಜಕೀಯ ಜೀವನವನ್ನು ಅಂತ್ಯಗೊಳಿಸಲು ಸಂತಸವಾಗುತ್ತಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ
ಸೋನಿಯಾ ಗಾಂಧಿಯವರು ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ತಮ್ಮ ಪುತ್ರಿ ಪ್ರಿಯಾಂಕ ಗಾಂಧಿ ಅವರಿಗೆ ಕಾಂಗ್ರೆಸ್ ಭದ್ರಕೋಟೆಯಾಗಿರುವ ಈ ಕ್ಷೇತ್ರವನ್ನು ಬಿಟ್ಟು ಕೊಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.