ರಾಜಧಾನಿಗೆ ಮೋದಿ; ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ, ಹೊಸ ಮಾರ್ಗ ಹೀಗಿದೆ
ಫೆಬ್ರವರಿ 5, 6, 7 ರಂದು ಬೆಂಗಳೂರು ನಗರದೊಳಗೆ ಎಲ್ಲಾ ರೀತಿಯ ಲಘು, ಮಧ್ಯಮ ಹಾಗೂ ಭಾರಿ ಸರಕು ಸಾಗಣೆ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆ ತನಕ ಸಂಚಾರ ನಿರ್ಬಂಧ ವಿಧಿಸಲಾಗಿದೆ.
ಯಾವ ಮಾರ್ಗದಲ್ಲಿ ಸಂಚಾರ ನಿರ್ಬಂಧ?
*ತುಮಕೂರು ರಸ್ತೆಯಿಂದ ಬೆಂಗಳೂರು ನಗರದೊಳಗೆ ಸರಕು ಸಾಗಣೆ ವಾಹನಗಳ ನಿರ್ಬಂಧ
*ಮೈಸೂರು ರಸ್ತೆಯಿಂದ ನಾಯಂಡಹಳ್ಳಿ ಮತ್ತು ಸೋಮನಹಳ್ಳಿಯವರೆಗೆ
*ಬಳ್ಳಾರಿ ರಸ್ತೆಯಿಂದ ಬೆಂಗಳೂರು ನಗರದೊಳಗೆ
*ಹೊಸಕೋಟೆ ರಸ್ತೆಯಿಂದ ಹೆಬ್ಬಾಳವರೆಗೆ
ಮೂರು ದಿನ ಬಾರಿ ಸರಕು ಸಾಗಣೆ ವಾಹನಗಳಿಗೆ ಬದಲಿ ಮಾರ್ಗ ಹೀಗಿದೆ
*ತುಮಕೂರು ಕಡೆಯಿಂದ ಬಳ್ಳಾರಿ ರಸ್ತೆ, ಹೈದರಾಬಾದ್ ಕಡೆಗೆ ಸಂಚರಿಸುವ ವಾಹನಗಳು ಡಾಬಸ್ ಪೇಟೆಯಲ್ಲಿ ಎಡ ತಿರುವು ಪಡೆದು ದೊಡ್ಡಬಳ್ಳಾಪುರ ಕಡೆ ಸಂಚರಿಸಬೇಕು.
*ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಸಂಚರಿಸುವ ವಾಹನಗಳು ಸೊಂಡೆಕೊಪ್ಪ ಕ್ರಾಸ್ ನಲ್ಲಿ ಬಲ ತಿರುವು ಪಡೆದು ತಾವರೆಕೆರೆ ಮುಖಾಂತರ ಮಾಗಡಿ ರಸ್ತೆಗೆ ಸಂಪರ್ಕ ಪಡೆದು ಆ ಮೂಲಕ ನೈಸ್ ರಸ್ತೆ ತಲುಪಿ ಮೈಸೂರು ರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಹೊಸೂರು ಕಡೆ ಸಂಚರಿಸಬೇಕು.
*ಬಳ್ಳಾರಿ ರಸ್ತೆ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಸಂಚರಿಸುವ ವಾಹನಗಳು ದೇವನಹಳ್ಳಿ ಬಲ ತಿರುವು ಪಡೆದು ದೊಡ್ಡಬಳ್ಳಾಪುರ ರಸ್ತೆಯ ಮೂಲಕ ತುಮಕೂರು ಕಡೆಗೆ ಸಂಪರ್ಕ ಪಡೆಯುವುದು.
*ಹೊಸಕೋಟೆಯಿಂದ ತುಮಕೂರು ಕಡೆಗೆ ಸಂಚರಿಸುವ ವಾಹನಗಳು ಬೂದಿಗೆರೆ ಕ್ರಾಸ್ ಮುಖಾಂತರ ದೇವನಹಳ್ಳಿ, ದೊಡ್ಡಬಳ್ಳಾಪುರ ಮೂಲಕ ಡಾಬಸ್ ಪೇಟೆ ಮೂಲಕ ತುಮಕೂರು ಕಡೆ ಸಂಚಾರ.
18.82 ಉದ್ದದ ಈ ಕಾರಿಡಾರ್ 16 ಮೆಟ್ರೋ ನಿಲ್ದಾಣಗಳಲ್ಲಿ ಸೇವೆ ನೀಡಲಿದೆ. ಈ ಭಾಗದ ನಾಗರಿಕರು ನಮ್ಮ ಮೆಟ್ರೋ ಸೇವೆಯನ್ನು ಬಳಸಿಕೊಂಡು ತಮ್ಮ ಪ್ರಯಾಣ ಮಾಡಬಹುದಾಗಿದೆ.
ನಮ್ಮ ಮೆಟ್ರೋದಲ್ಲಿ ಈ ವರ್ಷ 3 ಮಾರ್ಗಗಳು ವಾಣಿಜ್ಯ ಸಂಚಾರಕ್ಕೆ ಮುಕ್ತಗೊಳ್ಳಲಿವೆ.ಅಲ್ಲದೇ ವೈಟ್ಫೀಲ್ಡ್ ಮಾರ್ಗ ಮಾರ್ಚ್ ತಿಂಗಳಿನಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ವರದಿಯಾಗಿದೆ.
ಕೇಂದ್ರ ಬಜೆಟ್ನಲ್ಲಿ ಬೆಂಗಳೂರಿಗೆ 450 ಕೋಟಿ
ಕೇಂದ್ರ ಬಜೆಟ್ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ನಿಡಲಾಗಿದೆ. ಜೊತೆಗೆ ಬೆಂಗಳೂರಿಗೂ ಬಂಪರ್ ಅನುದಾನ ಒದಗಿಸಲಾಗಿದೆ ಎಂಬ ಅಂಶ ಇದೀಗ ವರದಿಯಾಗಿದೆ. .
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ 2023 ರಲ್ಲಿ, ಬೆಂಗಳೂರಿನಲ್ಲಿ ಮಹತ್ವದ ಹಂಚಿಕೆಯನ್ನು ಪಡೆದಿರುವ ಯೋಜನೆಯು ಬಹು ನಿರೀಕ್ಷಿತ ಬೆಂಗಳೂರು ಉಪನಗರ ರೈಲ್ವೆ ಯೋಜನೆ (BSRP) ಆಗಿದೆ.