ರಾಜ್ಯಕ್ಕೆ ಮತ್ತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ : ಫೆ. 23 ರಂದು ಬೆಂಗಳೂರು, ಬಳ್ಳಾರಿ ಕಾರ್ಯಕ್ರಮದಲ್ಲಿ ಭಾಗಿ

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆಬ್ರವರಿ 23 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಎರಡು ಪ್ರಮುಖ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ಶನಿವಾರ ತಿಳಿಸಿವೆ.
ಅಮಿತ್ ಶಾ ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಚುನಾವಣಾ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಅವರು ಇಲ್ಲಿ ಪಕ್ಷದ ನಾಯಕರೊಂದಿಗೆ ಸಂಕ್ಷಿಪ್ತ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗೃಹ ಸಚಿವರು ಬಳ್ಳಾರಿ ಜಿಲ್ಲೆಗೆ ತೆರಳಲಿದ್ದು, ಸಂಡೂರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಅಮಿತ್ ಶಾ ಅವರ ಕರ್ನಾಟಕ ಭೇಟಿ 12 ದಿನಗಳ ಅವಧಿಯಲ್ಲಿ ಎರಡನೇ ಬಾರಿ ನಡೆಯಲಿದೆ. ಇದಕ್ಕೂ ಮುನ್ನ ಅವರು ಫೆಬ್ರವರಿ 11 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದರು, ಅಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದರು.