ರಾಜ್ಯಕ್ಕೆ ಇಂದು ಅಮಿತ್ ಶಾ ಭೇಟಿ: ಬೆಂಗಳೂರಿಗರೇ 2 ದಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಒಮ್ಮೆ ಗಮನಿಸಿ

ರಾಜ್ಯಕ್ಕೆ ಇಂದು ಅಮಿತ್ ಶಾ ಭೇಟಿ: ಬೆಂಗಳೂರಿಗರೇ 2 ದಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಒಮ್ಮೆ ಗಮನಿಸಿ

ಬೆಂಗಳೂರು : ಮುಂದಿನ ಚುನಾವಣೆಗೆ ರಣತಂತ್ರ ರೂಪಿಸಲು ಮತ್ತೆ ರಾಜ್ಯಕ್ಕೆ ಇಂದು ಅಮಿತ್ ಶಾ ಭೇಟಿ ನೀಡುವ ಹಿನ್ನಲೆ ಬೆಂಗಳೂರಿನ ಹಲವು ರಸ್ತೆಗಳ ಸಂಚಾರ ನಿರ್ಬಂಧ ಇರಲಿದ್ದು ಪರ್ಯಾಯ ಸಂಚಾರ ಮಾರ್ಗ ಬಳಸಲು ಪೊಲೀಸರು ಸಲಹೆ ನೀಡಿದ್ದಾರೆ. ಈ ಕುರಿತ ಕಂಪ್ಲೀಟ್‌ ಮಾಹಿತಿ ಇಲ್ಲಿದೆ ಓದಿ

ಅಮಿತ್ ಶಾ ಅವರು ಬಳ್ಳಾರಿಯ ಸಂಡೂರಿಗೆ ಭೇಟಿ ನೀಡಿದ ನಂತರ ಗುರುವಾರ ಬೆಂಗಳೂರಿಗೆ ತಲುಪಲಿದ್ದಾರೆ. ರೇಸ್ ಕೋರ್ಸ್ ರಸ್ತೆ ಬಳಿಯ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ರಾಜ್ಯ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ ಈ ಬೆನ್ನಲ್ಲೆ ಸಂಚಾರ ಜನದಟ್ಟನೆ ಹೆಚ್ಚಾಗುವ ಹಿನ್ನೆಲೆ ನಗರ ಸಂಚಾರ ಪೊಲೀಸರು ಗುರುವಾರದಿಂದ ಶುಕ್ರವಾರ ಮಧ್ಯಾಹ್ನದವರೆಗೆ ಸಂಚಾರ ನಿರ್ಬಂಧ ಹೇರಲಾಗಿದೆ .ವಾಹ ಪ್ರಯಾಣಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಲಿದೆ.

ಬಳ್ಳಾರಿ ರಸ್ತೆ, ಮೇಖ್ರಿ ವೃತ್ತ, ಕಾವೇರಿ ಥಿಯೇಟರ್ ಜಂಕ್ಷನ್, ರೇಸ್ ಕೋರ್ಸ್ ರಸ್ತೆ, ತಾಜ್ ವೆಸ್ಟ್ ಎಂಡ್, ಟೌನ್ ಹಾಲ್, ಲಾಲ್ ಬಾಗ್ ರಸ್ತೆ, ಮಿನರ್ವ ರಸ್ತೆ, ಜೆಸಿ ರಸ್ತೆ, ಎನ್ ಆರ್ ಚೌಕ್, ಮೈಸೂರು ಬ್ಯಾಂಕ್ ವೃತ್ತ, ಅರಮನೆ ರಸ್ತೆ, ಸಿಐಡಿ ಜಂಕ್ಷನ್, ಬಸವೇಶ್ವರ ಜಂಕ್ಷನ್, ಅಲಿ ಆಸ್ಕರ್ ರಸ್ತೆ, ಇನ್‌ಫೆಂಟ್ರಿ ರಸ್ತೆ, ಕಾಫಿ ಬೋರ್ಡ್ ಜಂಕ್ಷನ್ (ಬಿಆರ್ ರಸ್ತೆ), ಮಣಿಪಾಲ್ ಜಂಕ್ಷನ್,

ಎಂಜಿ ರಸ್ತೆ, ಟ್ರಿನಿಟಿ ಸರ್ಕಲ್, ಕಮಾಂಡ್ ಆಸ್ಪತ್ರೆ, ದೊಮ್ಮಲೂರು ವಾಟರ್ ಟ್ಯಾಂಕ್, ಇಂದಿರಾನಗರ 100 ಅಡಿ ರಸ್ತೆ, ಇಸ್ರೋ ಜಂಕ್ಷನ್, ಎಚ್‌ಎಎಲ್ ಮತ್ತು ಏರ್‌ಪೋರ್ಟ್ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ. ಈ ನಿಟ್ಟಿನಲ್ಲಿ ಸಿಲಿಕಾನ್‌ ಸಿಟಿ ಬೆಂಗಳೂರು ವಾಹನ ಸವಾರರು ಮತ್ತು ಪ್ರಯಾಣಿಕರು ಈ ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗಗಳನ್ನು ಬಳಸಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ. ನಗರದ ಕೆಲ ಮಾರ್ಗಗಳಲ್ಲೊ ಟ್ರಾಫಿಕ್‌ ಸಮಸ್ಯೆ ಹೆಚ್ಚಾಗುವ ಎಲ್ಲಾ ಸಾಧ್ಯತೆಯಿದೆ.