ರಾಜ್ಯದಲ್ಲಿ ಅಪಾರ ಮಳೆ: ರಾಜ್ಯಕ್ಕೆ ವಕ್ಕರಿಸಲಿದೆ ಮತ್ತೊಂದು ಸೈಕ್ಲೋನ್
ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಅಪಾರ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಜನ ರೋಸಿ ಹೋಗಿದ್ದಾರೆ. ಈ ನಡುವೆ ರಾಜ್ಯಕ್ಕೆ ಮತ್ತೊಂದು ಸೈಕ್ಲೋನ್ ಆವರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ನವೆಂಬರ್ 26ಕ್ಕೆ ರಾಜ್ಯದಲ್ಲಿ ಮತ್ತೊಂದು ಸೈಕ್ಲೋನ್ ಬರಲಿದ್ದು, ಬಂಗಾಳಕೊಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆಯಿದೆ.ಹೀಗಾಗಿ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ. ವಾಯುಭಾರ ಕುಸಿತದಿಂದಾಗಿ ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಲಾಗಿದೆ. ಸದ್ಯದ ಮಳೆ 25ಕ್ಕೆ ಕ್ಷೀಣಿಸಲಿದ್ದು, ಇದಾದ ಬೆನ್ನಲ್ಲೇ ಒಂದೇ ದಿನಕ್ಕೆ ರಾಜ್ಯಕ್ಕೆ ಮತ್ತೊಂದು ಚಂಡಮಾರುತ ಬರುವ ಸಾಧ್ಯತೆಯಿದೆ.ಈಗಾಗಲೇ ಮಳೆಯಿಂದಾಗಿ ರಾಜ್ಯದಲ್ಲಿ ಅಪಾರ ಬೆಳೆ, ಮನೆ ಹಾಗೂ ಪ್ರಾಣ ಹಾನಿ ಹೀಗೆ ಅನೇಕ ನಷ್ಟ ಸಂಭವಿಸಿದ್ದು, ಜನ ಕಂಗಲಾಗಿದ್ದು ಚಂಡಮಾರುತದಿಂದ ಮತ್ತಷ್ಟು ಸಮಸ್ಯೆಯಾಗಲಿದೆ.