ರಾಜ್ಯದಲ್ಲಿ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆಗೆ ಅವಕಾಶ ಇಲ್ಲ

ರಾಜ್ಯದಲ್ಲಿ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆಗೆ ಅವಕಾಶ ಇಲ್ಲ

ಶಿವಮೊಗ್ಗ : ರಾಜ್ಯದಲ್ಲಿ ಮುಸ್ಲಿಂ ಮಹಿಳೆಯರಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆ ವಿಚಾರ ಸಂಬಂಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಸ್ಲಿಂ ಕಾಲೇಜಿಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತ್ಯೇಕ ಮುಸ್ಲಿಂ ಕಾಲೇಜಿಗೆ ಅವಕಾಶ ಇಲ್ಲ. ನಾನು ಯಾವುದೇ ಇಲಾಖೆ ಅಧಿಕಾರಿ, ಅಂಟೆಂಡರ್ ನಂಬುವುದಿಲ್ಲ. ಮುಸ್ಲಿಂ ಕಾಲೇಜು ವಿಚಾರದಲ್ಲಿ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ಮಾಡಲ್ಲ ಎಂದು ಹೇಳಿದ್ದಾರೆ ಎಂದರು.

ಬೆಂಗಳೂರು, ದಾವಣಗೆರೆ, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಮುಸ್ಲಿಂರಿಗಾಗಿ ಪ್ರತ್ಯೇಕ ಮಹಿಳಾ ಕಾಲೇಜು ಸ್ಥಾಪಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎನ್ನಲಾಗಿತ್ತು.