ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ: ಜೆ.ಪಿ ನಡ್ಡಾ ವಿಶ್ವಾಸ

ವಿಜಯಪುರ: ವಿಜಯಪುರ ಜಿಲ್ಲೆ ಸಿಂದಗಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಭಾಷಣ ಮಾಡಿದ್ದಾರೆ. ಪವಿತ್ರ ಭೂಮಿ ವಿಜಯಪುರಕ್ಕೆ ನನ್ನ ನಮನ ಸಲ್ಲಿಸುತ್ತೇನೆ.
ಜ್ಞಾನಯೋಗ್ರಾಶಮಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದೇನೆ.
ಸಭ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಹಾಗೂ ಸಬ್ ಕಾ ಪ್ರಯಾಸ್ ಅಡಿ ದೇಶವನ್ನು ಅಭಿವೃದ್ಧಿಗೊಳಿಸುವ ಗುರಿಯನ್ನು ಹೊಂದಿದೆ. ಕರ್ನಾಟಕದಲ್ಲಿ ಅಭಿವೃದ್ಧಿಯಾದರೆ ದೇಶದ ಅರ್ಥ ವ್ಯವಸ್ಥೆ ಸುಧಾರಣೆಯಾಗಿದೆ. ರಾಜ್ಯವನ್ನು ಅಭಿವೃದ್ಧಿಯತ್ತ ತೆಗೆದುಕೊಂಡು ಹೋಗುತ್ತಿದ್ದೇವೆ.