ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ : ಮಾಜಿ ಸಿಎಂ ಬಿಎಸ್ ವೈ ವಿಶ್ವಾಸ

ಕಲಬುರಗಿ : ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದ್ದು, ನಿಶ್ಚಿತವಾಗಿ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ.
ಮೋದಿಯಂತಹ ಒಬ್ಬ ಪ್ರಧಾನಿ ದೇಶಕ್ಕೆ ಲಭಿಸಿದ್ದು ನಮ್ಮ ಸೌಭಾಗ್ಯವಾಗಿದೆ. ಇಂತಹ ಮಹಾನಾಯಕನ ನೇತೃತ್ವದಲ್ಲಿ ನಾವು ಅಧಿಕಾರಕ್ಕೆ ಬರಲಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಎರಡೂ ಮೂರು ಬಾರಿ ಕರ್ನಾಟಕಕ್ಕೆ ಬರಲಿದ್ದಾರೆ ಎಂದರು