ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ : ಮಾಜಿ ಸಿಎಂ ಬಿಎಸ್ ವೈ ವಿಶ್ವಾಸ

ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ : ಮಾಜಿ ಸಿಎಂ ಬಿಎಸ್ ವೈ ವಿಶ್ವಾಸ

ಶಿವಮೊಗ್ಗ : ಈ ಬಾರಿಯ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಶಿಕಾರಿಪುರ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಹೇಳಿದ್ದೇನೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕಾರಿಪುರ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಬಿ.ವೈ.

ವಿಜಯೇಂದ್ರಗೆ ಹೇಳಿದ್ದೇನೆ. ಬಿ.ವೈ.ವಿಜಯೇಂದ್ರ ಶಿಕಾರಿಪುರದಲ್ಲಿ ಬಹಳ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ರಾಜ್ಯದಲ್ಲಿ ಈ ಬಾರಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.

ಇನ್ನೆರಡು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗಲಿದೆ.ಈಗಾಗಲೇ ಎರಡು ದಿನಗಳ ಕಾಲ ಕೋರ್ ಕಮಿಟಿ ಸಭೆ ಆಗಿದೆ. ಶಿವಮೊಗ್ಗ, ಬೆಳಗಾವಿ ಜಿಲ್ಲೆ ಟಿಕೆಟ್ ಗೊಂದಲಕ್ಕೆ ತೆರ ಬೀಳಲಿದೆ ಎಂದರು. ಜನರ ಅಪೇಕ್ಷೆಯಂತ ಶಿಕಾರಿಪುರ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ. ವಿಜಯೇಂದ್ರ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತಾರೆ. ರಾಜದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.