ರಾಜ್ಯದಲ್ಲಿ 15ಕ್ಕೂ ಅಧಿಕ ಪಕ್ಷಗಳೊಂದಿಗೆ ಮೈತ್ರಿ: ಜನತಾ ಪಕ್ಷದ ರಾಜ್ಯಾಧ್ಯಕ್ಷೆ ಬಿ.ಟಿ.ಲಲಿತಾ ನಾಯ್ಕ್
ಬೆಂಗಳೂರು, : ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ 15ಕ್ಕೂ ಅಧಿಕ ರಾಜಕೀಯ ಪಕ್ಷಗಳು ಮೈತ್ರಿ ಮಾಡಿಕೊಂಡು ಸ್ಪರ್ಧೆಗಿಳಿಯಲು ಚಿಂತನೆ ನಡೆಸಲಾಗಿದ್ದು, ಈ ಸಂಬಂಧ ಹಂತ ಹಂತವಾಗಿ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ಜನತಾ ಪಕ್ಷದ ರಾಜ್ಯಾಧ್ಯಕ್ಷೆ ಬಿ.ಟಿ.ಲಲಿತಾ ನಾಯ್ಕ್ ತಿಳಿಸಿದ್ದಾರೆ.
ಮಂಗಳವಾರ ಇಲ್ಲಿನ ಶೇಷಾದ್ರಿಪುರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆ ಏರ್ಪಡಿಸಿದ್ದ ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳೊಂದಿಗೆ ಸಾಧಕ-ಬಾಧಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.ರಾಷ್ಟ್ರೀಯ ಪಕ್ಷಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿವೆ. ಹೀಗಾಗಿ, ನಾವೇ ಖುದ್ದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಮಯ ಬಂದಿದ್ದು, ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸಕ್ರಿಯವಾಗಿರುವ ಜನಪರ ಪಕ್ಷಗಳು ಒಗ್ಗೂಡಿ ಚುನಾವಣೆ ಎದುರಿಸಲಿದ್ದೇವೆ. ಸದ್ಯ 15ಕ್ಕೂ ಅಧಿಕ ಪಕ್ಷಗಳೊಂದಿಗೆ ಸರಣಿ ಸಭೆಗಳನ್ನು ನಡೆಸಲಾಗುತ್ತಿದ್ದು, ಶೀಘ್ರದಲ್ಲಿಯೇ ಮೈತ್ರಿ ಪ್ರಕಟ ಮಾಡಲಿದ್ದೇವೆ ಎಂದು ಲಲಿತಾ ನಾಯ್ಕ್ ಹೇಳಿದರು.