ರಾಜ್ಯದ ರೈತರಿಗೆ ಗುಡ್ ನ್ಯೂಸ್ : 33 ಲಕ್ಷ ಜನರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ

ರಾಜ್ಯದ ರೈತರಿಗೆ ಗುಡ್ ನ್ಯೂಸ್ : 33 ಲಕ್ಷ ಜನರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ

ಬೆಂಗಳೂರು : ನಾಳೆ ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದು, ಶಾ ಆಗಮನದ ಹಿನ್ನೆಲೆ ಬಿಜೆಪಿ ಭರ್ಜರಿ ತಯಾರಿ ನಡೆಸಿದೆ.

ಡಿಸೆಂಬರ್ 30 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಅಮಿತ್ ಶಾ ಬೆಂಗಳೂರಿನ ಸಹಕಾರ ವಲಯದ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಸಹಕಾರ ಕ್ಷೇತ್ರದಿಂದ 33 ಲಕ್ಷ ಜನರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದ್ದು, 24,000 ರೂ ಕೋಟಿ ಸಾಲ ನೀಡುವ ಕಾರ್ಯಕ್ರಮಕ್ಕೆ ಅಮಿತ್ ಶಾ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಯಶಸ್ವಿನಿ ಯೋಜನೆಗೆ ಕೂಡ ಮರು ಚಾಲನೆ ನೀಡಲಾಗುತ್ತದೆ.

ಅದೇ ರೀತಿ ಸಮಾವೇಶದಲ್ಲಿ ಜನರನ್ನುದ್ದೇಶಿಸಿ ಮಾತನಾಡುವ ಅಮಿತ್ ಶಾ ಸ್ತ್ರೀ ಶಕ್ತಿ ಗುಂಪುಗಳಿಗೆ ಸಾಲ ಸೌಲಭ್ಯ ನೀಡುವ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ಅಮಿತ್ ಶಾ ಬೃಹತ್ ಸಮಾವೇಶದ ಬಗ್ಗೆ ಜನರಲ್ಲಿ ಕುತೂಹಲ ಮೂಡಿದೆ.