ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸೈಕಲ್, ಶೂ,ಸಾಕ್ಸ್ ಅನುದಾನ ನೇರ ಮಕ್ಕಳ ಬ್ಯಾಂಕ್ ಖಾತೆಗೆ ಜಮಾ!

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸೈಕಲ್, ಶೂ,ಸಾಕ್ಸ್ ಅನುದಾನ ನೇರ ಮಕ್ಕಳ ಬ್ಯಾಂಕ್ ಖಾತೆಗೆ ಜಮಾ!

ಬೆಂಗಳೂರು : ರಾಜ್ಯ ಸರ್ಕಾರವು ಶಾಲಾ ಮಕ್ಕಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಶೂ, ಸಾಕ್ಸ್ ಮತ್ತು ಸೈಕಲ್ ಅನುದಾನವನ್ನು ನೇರವಾಗಿ ಮಕ್ಕಳ ಬ್ಯಾಂಕ್ ಖಾತೆಗೆ ಜಮೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ರಾಜ್ಯದ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಶೂ, ಸಾಕ್ಸ್ ಭಾಗ್ಯ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಯೋಜನೆಯನ್ನು ಮುಂದಿನ ಸಾಲಿನಿಂದ ಪುನಾರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಹೀಗಾಗಿ 2022-23 ನೇ ಸಾಲಿನಲ್ಲಿ ಈ ಎರಡು ಯೋಜನೆಗಳಲ್ಲಿ ವಿದ್ಯಾರ್ಥಿಗಳಿಗೆ ಆಗುವ ವೆಚ್ಚದ ಮೊತ್ತವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ನಗದು ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ಕೊರೊನಾ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ 2018 ರಿಂದ ರಾಜ್ಯ ಸರ್ಕಾರವು ಉಚಿತ ಶೂ, ಸಾಕ್ಸ್ ಹಾಗು 8 ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಯೋಜನೆಯನ್ನು ಸ್ಥಗಿತಗೊಳಿಸಿದೆ. ಹೀಗಾಗಿ ಮುಂದಿನ ಶೈಕ್ಷಣಿಕ ಸಾಲಿನಿಂದ ಶೂ, ಸಾಕ್ಸ್, ಮತ್ತು ಸೈಕಲ್ ಅನುದಾನವನ್ನು ನೇರ ಮಕ್ಕಳ ಬ್ಯಾಂಕ್ ಖಾತೆ ಜಮೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.