ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಈ ಬಾರಿಯೂ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಅನುಮಾನ!

ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಈ ಬಾರಿಯೂ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಅನುಮಾನ!

ಬೆಂಗಳೂರು : ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು , ಕೊರೊನಾ ಕಾರಣದಿಂದ ಸರ್ಕಾರಿ / ಅನುದಾನಿತ ಶಾಲೆಗಳ 8 ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿಯೂ ಸೈಕಲ್ ಸಿಗುವುದು ಅನುಮಾನ ಎನ್ನಲಾಗಿದೆ .

ಕೊರೊನಾ ಸೋಂಕಿನಿಂದಾಗಿ ಆರ್ಥಿಕತೆ ಮೇಲೆ ಪರಿಣಾಮ ಬೀರಿದ್ದರಿಂದಾಗಿ ಈ ವರ್ಷವೂ 8ನೇ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಉಚಿತ ಬೈಸಿಕಲ್ ಯೋಜನೆ ಮುಂದುವರೆಸುವುದು ಅನುಮಾನವಾಗಿದೆ.

2019-20 ನೇ ಸಾಲಿನಲ್ಲಿ ರಾಜ್ಯದಲ್ಲಿ 2,44,901 ಬಾಲಕಿಯರು ಹಾಗೂ 2,59,624 ಬಾಲಕರಿಗೆ ಸೈಕಲ್ ವಿತರಣೆ ಮಾಡಲಾಗಿತ್ತು. ಕಳೆದ ವರ್ಷ 5 ಲಕ್ಷ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡುವ ಅಂದಾಜು ಇತ್ತು. ಆದರೆ ಕೊರೊನಾ ಲಾಕ್ ಡೌನ್, ಅನುದಾನದ ಕೊರತೆ ಕಾರಣಗಳಿಂದಾಗಿ ಸೈಕಲ್ ವಿತರಣೆ ಕೈಬಿಡಲಾಗಿತ್ತು. ಹೀಗಾಗಿ ಈ ಬಾರಿಯೂ ಸೈಕಲ್ ವಿತರಣೆ ಮಾಡುವುದು ಅನುಮಾನ ಎಂದು ಹೇಳಲಾಗುತ್ತಿದೆ.

ಸರ್ಕಾರ ಅನುದಾನ ಕೊಟ್ಟರೆ ಮಾತ್ರ ಈ ಶೈಕ್ಷಣಿಕ ವರ್ಷಕ್ಕೆ ಉಚಿತ ಬೈಸಿಕಲ್ ವಿತರಣೆಯನ್ನ ವಿದ್ಯಾರ್ಥಿಗಳಿಗೆ ಮಾಡಲಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂಲಗಳು ಹೇಳಿವೆ. 2021-22ನೇ ಶೈಕ್ಷಣಿಕ ಸಾಲಿನ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಆಗುವುದು ಕಷ್ಟ ಎನ್ನಲಾಗುತ್ತದೆ. ಬಜೆಟ್‍ನಲ್ಲಿ ಇದಕ್ಕಾಗಿ ಅನುದಾನ ಮೀಸಲು ಇಟ್ಟಿಲ್ಲ. ಹೀಗಾಗಿ, ಶಾಲಾ ಮಕ್ಕಳಿಗೆ ಸೈಕಲ್ ಸಿಗುವುದು ಅನುಮಾನ ಎಂದು ಹೇಳಲಾಗುತ್ತಿದೆ.