ಅಖಿಲ ಭಾರತ ಸೇವಾ ನಿಯಮಕ್ಕೆ ಬದ್ಧರಾಗಿರಿ: ರಾಜ್ಯ ಸರ್ಕಾರದಿಂದ ರೋಹಿಣಿ, ರೂಪಾಗೆ ನೋಟಿಸ್ ನಲ್ಲಿ ಖಡಕ್ ಎಚ್ಚರಿಕೆ

ಬೆಂಗಳೂರು: ಐಪಿಎಸ್ ಅಧಿಕಾರಿ ರೂಪ.ಡಿ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯಾದ ನಿಮ್ಮಗಳ ನಡೆಯಿಂದ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ನೀವು ಮಾಧ್ಯಮಗಳ ಮುಂದೆ ಆರೋಪ, ಪ್ರತ್ಯಾರೋಪ ಮಾಡಿದ್ದು ಸರಿಯಲ್ಲ. ಇಬ್ಬರು ಅಖಿಲ ಭಾರತ ಸೇವಾ ನಿಯಮಕ್ಕೆ ಬದ್ಧರಾಗಿರುವಂತೆ ರಾಜ್ಯ ಸರ್ಕಾರ ನೋಟಿಸ್ ನಲ್ಲಿ ರೂಪಾ ಹಾಗೂ ಸಿಂಧೂರಿಗೆ ಖಡಕ್ ಎಚ್ಚರಿಕೆ ನೀಡಿದೆ.ಈ ಕುರಿತಂತೆ ಇಂದು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಅವರು ಐಪಿಎಸ್ ಅಧಿಕಾರಿ ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಿಎಂ ಬೊಮ್ಮಾಯಿ ಅವರ ಸೂಚನೆ ಮೇರೆಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ಅವರು ಐಪಿಎಸ್ ರೂಪ ಹಾಗೂ ಐಎಎಸ್ ರೋಹಿಣಿ ಸಿಂಧೂರಿ ಅವರಿಗೆ ನೀಡಿರುವಂತ ನೋಟಿಸ್ ನಲ್ಲಿ ನಿಮ್ಮ ದೂರುಗಳನ್ನು ಸರ್ಕಾರದ ಮುಂದೆ ಹೇಳಿ. ಅದರನ್ನು ಬಿಟ್ಟು ಬಹಿರಂಗವಾಗಿ ಆರೋಪ-ಪ್ರತ್ಯಾರೋಹ ಮಾಡುತ್ತಿರೋದಕ್ಕೆ ಆಕ್ಷೇಪವನ್ನು ವ್ಯಕ್ತ ಪಡಿಸಿದೆ.ನಿಮ್ಮ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರ ತಂದಿದೆ. ಇಬ್ಬರು ಅಖಿಲ ಭಾರತ ಸೇವಾ ನಿಯಮಕ್ಕೆ ಬದ್ಧರಾಗಿರಬೇಕು. ಇಲ್ಲವಾದಲ್ಲಿ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳೋದಾಗಿ ಎಚ್ಚರಿಕೆಯನ್ನು ನೀಡಿದೆ.