ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್ : ಇಂದು ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವರು ದೆಹಲಿಗೆ

ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್ : ಇಂದು ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವರು ದೆಹಲಿಗೆ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ರಾಜ್ಯದ ಕೈ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಬರುವಂತೆ ಆಹ್ವಾನ ನೀಡಿದೆ.

ಕಾಂಗ್ರೆಸ್ ಹೈಕಮಾಂಡ್ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ, ತಂತ್ರಗಾರಿಕೆ, ರಾಜ್ಯ ಪ್ರವಾಸ ಕೈಗೊಳ್ಳುವ ಕುರಿತಂತೆ ತೀರ್ಮಾಣ ಕೈಗೊಳ್ಳಲು ಅಖಿಲ ಭಾರತ ಕಾಂಗ್ರೆಸ್ ಇಂದು ದೆಹೆಲಿಯಲ್ಲಿ ಮಹತ್ವದ ಸಭೆ ಕರೆದಿದೆ. ಇಂದು ಸಂಜೆ 4.30 ಕ್ಕೆ ಸಭೆ ನಿಗದಿಯಾಗಿದೆ.

ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ರಾಮಲಿಂಗಾ ರೆಡ್ಡಿ, ಈಶ್ವರ ಖಂಡ್ರೆ, ಧ್ರುವ ನಾರಾಯಣ, ಸತೀಶ್ ಜಾರಕಿಹೊಳಿ, ಜಿ.ಪರಮೇಶ್ವರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆಯಲ್ಲಿ ಭಾಗಿಯಾಗಲಿದ್ದಾರೆ.