ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ `ಕಿರಣ್ ಕುಮಾರ್' ರಾಜೀನಾಮೆ

ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ `ಕಿರಣ್ ಕುಮಾರ್' ರಾಜೀನಾಮೆ

ತುಮಕೂರು: ಬಿಜೆಪಿ ಶಾಸಕ, ಆರ್ ಎಸ್ ಎಸ್ ಕಟ್ಟಾಳು ಕಿರಣ್ ಕುಮಾರ್ ಅವರು, ಇಂದು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರದಲ್ಲಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ಪತ್ರದಲ್ಲಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರುವಿನ ಗಾಂಧಿಪೇಟೆಯ ಕಿರಣ್ ಕುಮಾರ್ ಕೆ.ಎಸ್ ಆದ ನಾನು, ವೈಯಕ್ತಿಕ ಕಾರಣದಿಂದ ಸ್ವಇಚ್ಛೆಯಿಂದ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರೋದಾಗಿ ತಿಳಿಸಿದ್ದಾರೆ.

ಅಂದಹಾಗೇ ಚುನಾವಣೆಯ ಹೊಸ್ತಿನಲ್ಲಿ ಬಿಜೆಪಿಗೆ ಬಿಗ್ ಶಾಕ್ ಎನ್ನುವಂತೆ ಹೀಗೆ ರಾಜೀನಾಮೆ ನೀಡಿರುವಂತ ಕಿರಣ್ ಕುಮಾರ್, ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿಯೇ ಅವರು ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಗೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಮೊನ್ನೆಯಷ್ಟೇ ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ಆಪ್ತ ತಮ್ಮಯ್ಯ ಬಿಜೆಪಿಗೆ ಗುಡ್ ಬೈ ಹೇಳುವುದಾಗಿ ಘೋಷಿಸಿದ್ದರು. ಈ ಬೆನ್ನಲ್ಲೇ ಇಂದು ಕಿರಣ್ ಕುಮಾರ್ ಕೂಡ ಅವರ ದಾರಿಯನ್ನೇ ಹಿಡಿದಿದ್ದು, ಬಿಜೆಪಿ ಮಾಜಿ ಶಾಸಕ, ಆರ್ ಎಸ್ ಎಸ್ ಕಟ್ಟಾಳು ಕಾಂಗ್ರೆಸ್ ಸೇರ್ಪಡೆ ಫಿಕ್ಸ್ ಎಂದೇ ಹೇಳಲಾಗುತ್ತಿದೆ.