ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ 'ನಂದೀಶ್ ರೆಡ್ಡಿ' ನೇಮಕ

ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ 'ನಂದೀಶ್ ರೆಡ್ಡಿ' ನೇಮಕ

ಬೆಂಗಳೂರು : ಮಾಜಿ ಶಾಸಕ ನಂದೀಶ್ ರೆಡ್ಡಿ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಿಸಿ ಆದೇಶ ಹೊರಡಿಸಿದೆ.

ಇತ್ತೀಚೆಗೆ ನಂದೀಶ್ ರೆಡ್ಡಿ ಪಕ್ಷದಿಂದ ದೂರ ಇದ್ದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಗುಸುಗುಸು ಕೇಳಿಬಂದಿತ್ತು, ಈ ಹಿನ್ನೆಲೆ ಅವರನ್ನು ಸಮಾಧಾನ ಪಡಿಸಲು ಬಿಜೆಪಿ ಘಟಕದ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ ಎಂಬ ಮಾತು ಕೇಳಿಬಂದಿದೆ.

ಜೊತೆಗೆ ಚಾಮರಾಜನಗರ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾಗಿ ಜಿ.ನಾರಾಯಣ ಪ್ರಸಾದ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.