ರಾಜ್ಯ ಸರ್ಕಾರಕ್ಕೆ ಹೆಚ್ಚಿದ ಮೀಸಲಾತಿ ಒತ್ತಡ : ಪಂಚಮಸಾಲಿ, ಒಕ್ಕಲಿಗ ಸಮುದಾಯಗಳಿಂದ ಡೆಡ್ ಲೈನ್!

ರಾಜ್ಯ ಸರ್ಕಾರಕ್ಕೆ ಹೆಚ್ಚಿದ ಮೀಸಲಾತಿ ಒತ್ತಡ : ಪಂಚಮಸಾಲಿ, ಒಕ್ಕಲಿಗ ಸಮುದಾಯಗಳಿಂದ ಡೆಡ್ ಲೈನ್!

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಇದೀಗ ಮೀಸಲಾತಿ ಹೆಚ್ಚಳಕ್ಕೆ ಪಂಚಮಸಾಲಿ, ಒಕ್ಕಲಿಗ ಸಮುದಾಯದಿಂದ ಒತ್ತಡ ಹೆಚ್ಚಾಗಿದ್ದು, ರಾಜ್ಯ ಸರ್ಕಾರಕ್ಕೆ ಡೆಡ್ ಲೈನ್ ನೀಡಲಾಗಿದೆ.

ಒಕ್ಕಲಿಗ ಸಮುದಾಯದ ಮೀಸಲಾತಿಯನ್ನ 2023 ನೇ ಜನವರಿ 23 ರೊಳಗೆ ಹೆಚ್ಚಿಸುವಂತೆ ಆದಿ ಚುಂಚನಗಿರಿ ಶ್ರೀಗಳು ಸರ್ಕಾರಕ್ಕೆ ಗಡುವು ನೀಡಿದ್ದಾರೆ. ರಾಜ್ಯ ಒಕ್ಕಲಿಗ ಸಂಘ, ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಸಹಯೋಗದಲ್ಲಿ ಬೆಂಗಳೂರನಲ್ಲಿ ಭಾನುವಾರ ನಡೆದ ಸಭೆಯಲ್ಲಿ ಒಕ್ಕಲಿಗ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಶೇ.4ರಷ್ಟಿರುವ ಮೀಸಲಾತಿ ಪ್ರಮಾಣವನ್ನು ಶೇ.12 ರಷ್ಟು ಹೆಚ್ಚಿಸಬೇಕೆಂದು ಚರ್ಚೆ ನಡೆಸಿ ತಿರ್ಮಾನ ಕೈಗೊಳ್ಳಲಾಯಿತು. ಒಂದು ವೇಳೆ ಸರಕಾರ ಗಡುವಿನೊಳಗೆ ಮೀಸಲು ಪ್ರಮಾಣ ಹೆಚ್ಚಳ ಮಾಡದಿದ್ದಲ್ಲಿ ರಾಜ್ಯಾದ್ಯಂತ ಮೀಸಲಾತಿಗಾಗಿ ಬೃಹತ್‌ ಹೋರಾಟದ ಕಿಚ್ಚು ಹೊತ್ತಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.