ರಾಜ್ಯ ಸರ್ಕಾರದಿಂದ ಕುಶಲಕರ್ಮಿಗಳಿಗೆ ಸಂಕ್ರಾಂತಿ ಗಿಫ್ಟ್ : 50 ಸಾವಿರ ರೂ. ಆರ್ಥಿಕ ನೆರವು ಘೋಷಣೆ

ರಾಜ್ಯ ಸರ್ಕಾರದಿಂದ ಕುಶಲಕರ್ಮಿಗಳಿಗೆ ಸಂಕ್ರಾಂತಿ ಗಿಫ್ಟ್ : 50 ಸಾವಿರ ರೂ. ಆರ್ಥಿಕ ನೆರವು ಘೋಷಣೆ

ಬೆಂಗಳೂರು : ಕುಶಲಕರ್ಮಿಗಳಿಗೆ ರಾಜ್ಯ ಸರ್ಕಾರವು ಸಂಕ್ರಾಂತಿ ಹಬ್ಬಕ್ಕೆ ಭರ್ಜರಿ ಗಿಫ್ಟ್ ನೀಡಿದ್ದು, ಪ್ರತಿ ಕುಶಲಕರ್ಮಿಗೆ ತಲಾ 15 ಸಾವಿರ ರೂ.ಗಳ ಸಹಾಯಧನ ನೀಡಲಿದೆ.

ರಾಜ್ಯದಲ್ಲಿರುವ ಸಣ್ಣ ಸಣ್ಣ ಕುಶಲಕರ್ಮಿಗಳಿಗೆ ಆರ್ಥಿಕ ನೆರವು ಕಲ್ಪಿಸಲು ರಾಜ್ಯ ಸರ್ಕಾರವು ಮುಂದಾಗಿದ್ದು, ಸಂಕ್ರಾಂತಿ ಹಬ್ಬಕ್ಕೆ ಪ್ರತಿ ಕುಶಕರ್ಮಿಗಳಿಗೆ ತಲಾ 50 ಸಾವಿರ ರೂ.ಗಳ ದುಡಿಯುವ ಬಂಡವಾಳ ನೀಡಲಿದೆ.

ಅದರಲ್ಲಿ ರಾಜ್ಯ ಸರ್ಕಾರವು 15 ಸಾವಿರ ರೂ. ಸಹಾಯಧನ ನೀಡಲಿದೆ. ಬ್ಯಾಂಕ್ ಗಳ ಮೂಲಕ ಉಳಿದ 35 ಸಾವಿರ ರೂ. ಗಳನ್ನು ಸಾಲ ಕೊಡಿಸಲಿದ.ೆ

ಕುಶಲಕರ್ಮಿಗಳಿಗೆ ಬ್ಯಾಂಕ್ ಗಳಿಂದ ಸಾಲ ಕೊಡಿಸುವ ಪ್ರಕ್ರಿಯೆಯನ್ನು ಜನವರಿ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸೂಚಿಸಲಾಗಿಇದ್ದು, ಫೆಬ್ರವರಿ 1 ಕ್ಕೆ ಕುಶಲಕರ್ಮಿಗಳಿಗೆ 50 ಸಾವಿರ ರೂ.ಗಳ ನೆರವು ಸಿಗಲಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.