'ರಾಜ್ಯ ಸರ್ಕಾರ'ದಿಂದ 'ವನ್ಯಪ್ರಾಣಿ ದಾಳಿ'ಯಿಂದ ಉಂಟಾಗುವ ಹಾನಿಯ 'ಪರಿಹಾರ ಧನ' ಹೆಚ್ಚಿಸಿ ಆದೇಶ

ಬೆಂಗಳೂರು: ವನ್ಯಪ್ರಾಣಿಗಳ ದಾಳಿಯಿಂದ ಉಂಟಾಗುವ ಮಾನವ ಪ್ರಾಣ ಹಾನಿ, ಶಾಶಅವತ ಅಂಗವಿಕಲತೆ, ಭಾಗಶಃ ಶಾಶ್ವತ ಅಂಗವಿಕಲತೆ, ಗಾಯಗೊಂಡವರಿಗೆ, ಆಸ್ತಿ-ಪಾಸ್ತಿ ನಷ್ಟ ಪ್ರಕರಣಗಳಿಗೆ ಪಾವತಿಸುತ್ತಿರುವ ಪರಿಹಾರ ಧನವನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಇಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ಹೊರಡಿಸಿರುವಂತ ನಡವಳಿಯ ಪ್ರತಿ ಕನ್ನಡ ನ್ಯೂಸ್ ನೌಗೆ ದೊರೆತಿದೆ. ಅದರಲ್ಲಿ ವನ್ಯಪ್ರಾಣಿಗಳ ದಾಳಿಯಿಂದ ಉಂಟಾಗುವ ಪ್ರಾಣ ಹಾನಿ, ಶಾಶ್ವತ ಅಂಗವಿಕಲತೆ, ಭಾಗಶಃ ಅಂಗವಿಕಲತೆ, ಗಾಯಗೊಂಡವರಿಗೆ, ಆಸ್ತಿ-ಪಾಸ್ತಿ ನಷ್ಟದ ಪರಿಹಾರ ಧನವನ್ನು ಪರಿಷ್ಕರಿಸಲಾಗಿದೆ ಎಂದು ತಿಳಿಸಿದ್ದಾರೆ.