ರಾಜ್ಯ ಸರ್ಕಾರದಿಂದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಸತಿ ಶಾಲೆ ನಿರ್ಮಾಣಕ್ಕೆ 71 ಕೋಟಿ ಅನುದಾನ

ಬೆಂಗಳೂರು : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ವಸತಿ ಶಾಲೆ ನಿರ್ಮಾಣಕ್ಕೆ 71 ಕೋಟಿ ಅನುದಾನ ನೀಡಲು ಸಂಪುಟ ಸಭೆ ಅಸ್ತು ಎಂದಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ 71 ಕೋಟಿ ವೆಚ್ಚದಲ್ಲಿ ನಾರಾಯಣ ಗುರುಗಳ ಹೆಸರಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಸತಿ ಶಾಲೆ ನಿರ್ಮಿಸಲು ಒಪ್ಪಿಗೆ ನೀಡಲಾಗಿದೆ.ಅದೇ ರೀತಿ ಜಲಜೀವನ್ ಮಿಷನ್ ಅಡಿಯಲ್ಲಿ ಶಿವಮೊಗ್ಗ ತಾಲೂಕಿನ ಆನವೇರಿ ಮತ್ತು ಇತರೆ 23 ಗ್ರಾಮಗಳಿಗೆ7 26.62 ಕೋಟಿ ಅಂದಾಜು ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ., ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಗೆ ಹೆಚ್ಚುವರಿಯಾಗಿ 54.60 ಕೋಟಿ ಷೇರು ಬಂಡವಾಳ ಬಿಡುಗಡೆಗೆ ಒಪ್ಪಿಗೆ, ಬೆಂಗಳೂರು ನಗರದ ಕಲಾಸಿಪಾಳ್ಯದಲ್ಲಿ 63.17 ಕೋಟಿ ವೆಚ್ಚದಲ್ಲಿ ನವೀನ ಮಾದರಿಯಲ್ಲಿ ನಿರ್ಮಿಸಿರುವ ಬಸ್ ಟರ್ಮಿನಲ್ ಕಾಮಗಾರಿಗೆ ಘಟನೋತ್ತರ ಅನುಮೋದನೆ. ಬಾಲ್ಯವಿವಾಹವನ್ನು ತಡೆಗಟ್ಟಲು ಕೊಪ್ಪಳ ಜಿಲ್ಲೆಯಲ್ಲಿ ಜಾರಿಗೆ ತಂದ ಸ್ಫೂರ್ತಿ ಯೋಜನೆಯನ್ನು 2022-23ನೇ ಸಾಲಿನಲ್ಲಿ 12.51 ಕೋಟಿ ವೆಚ್ಚದಲ್ಲಿ ಬಾಗಲಕೋಟೆ, ವಿಜಯಪುರ,ಬೆಳಗಾವಿ ಮತ್ತು ಕಲ್ಲುರ್ಗಿ ಜಿಲ್ಲೆಗಳ 11 ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ. ರಾಜ್ಯದ 847 ಉಪಕೇಂದ್ರಗಳನ್ನು 71.56 ಕೋಟಿ ವೆಚ್ಚದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.