ರಾಜ್ಯ ಸರ್ಕಾರದಿಂದ 100 ಅಂಬೇಡ್ಕರ್ ಹಾಸ್ಟೆಲ್ ಗಳ ನಿರ್ಮಾಣ
ಬೆಂಗಳೂರು: ಪ. ಜಾತಿ & ಪ. ಸಮುದಾಯದ ಜನರಿಗೆ ಮೀಸಲಾತಿ ಹೆಚ್ಚಿಸುವ ಕ್ರಾಂತಿಕಾರಿ ನಿರ್ಧಾರ ಮಾಡಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಕೂಡ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಶಿಕ್ಷಣಕ್ಕೆ ಒಟ್ಟು ನೂರು ಅಂಬೇಡ್ಕರ್ ಹಾಸ್ಟೆಲ್, 55 ಕನಕದಾಸ ಹಾಸ್ಟೆಲ್ & 5 ದೀನ್ ದಯಾಳ್ ಅವರ ಹೆಸರಿನಲ್ಲಿ ಮೈಸೂರು, ಧಾರವಾಡ, ಮಂಗಳೂರು, ಬೆಂಗಳೂರು, ಕಲಬುರಗಿಯಲ್ಲಿ ಮೆಗಾ ಹಾಸ್ಟೆಲ್ ನಿರ್ಮಾಣ ಮಾಡುತ್ತಿದ್ದೇವೆ ಎಂದರು.