ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಕಡಿತ ದೋಷಪೂರಿತ : ರಾಜ್ಯ ಸರ್ಕಾರದ ಆದೇಶಕ್ಕೆ ಸುಪ್ರೀಂಕೋರ್ಟ್ ಆಕ್ಷೇಪ

ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಕಡಿತ ದೋಷಪೂರಿತ : ರಾಜ್ಯ ಸರ್ಕಾರದ ಆದೇಶಕ್ಕೆ ಸುಪ್ರೀಂಕೋರ್ಟ್ ಆಕ್ಷೇಪ

ಬೆಂಗಳೂರು : ಮುಸ್ಲಿಂ ಕೋಟಾ ರದ್ದುಗೊಳಿಸಿದ ರಾಜ್ಯ ಸರ್ಕಾರದ ಕ್ರಮಕ್ಕೆ ಸುಪ್ರೀಂಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಅದ್ರಂತೆ, ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿ ಅವರನ್ನ ಆರ್ಥಿಕವಾಗಿ ದುರ್ಬಲ ವರ್ಗಕ್ಕೆ (EWS) ಸೇರಿಸುವ ಮಾರ್ಚ್ 27ರ ಸರ್ಕಾರಿ ಆದೇಶದ ಆಧಾರದ ಮೇಲೆ ಏಪ್ರಿಲ್ 18 ರವರೆಗೆ ಯಾವುದೇ ಪ್ರವೇಶ ಅಥವಾ ನೇಮಕಾತಿಗಳನ್ನ ಮಾಡಲಾಗುವುದಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮುಂದೆ ತಿಳಿಸಿದೆ.

ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಮುಸ್ಲಿಮರಿಗೆ ಮೀಸಲಾತಿಯನ್ನು ರದ್ದುಗೊಳಿಸಿ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳಿಗೆ ನೀಡುವ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮುಂದಿನ ವಿಚಾರಣೆ ಏಪ್ರಿಲ್ 18 ರಂದು ನ್ಯಾಯಾಲಯದಲ್ಲಿ ನಡೆಯಲಿದೆ.

ಮುಸ್ಲಿಮರಿಗೆ ಮೀಸಲಾತಿಯನ್ನು ರದ್ದುಗೊಳಿಸಿದ ವಿಧಾನದ ವಿರುದ್ಧ ಸುಪ್ರೀಂ ಕೋರ್ಟ್ ವ್ಯತಿರಿಕ್ತ ಅವಲೋಕನಗಳನ್ನು ಮಾಡಿದೆ, ಮೇಲ್ನೋಟಕ್ಕೆ ನಿರ್ಧಾರವು 'ದೋಷಪೂರಿತವಾಗಿದೆ' ಎಂದು ಅಭಿಪ್ರಾಯಪಟ್ಟಿದೆ.

ಕಳೆದ ಮೂರು ದಶಕದಿಂದ ಕರ್ನಾಟಕದಲ್ಲಿ ಮುಸ್ಲಿಮರಿಗೆ 2ಬಿ ಕೆಟಗರಿ ಅಡಿಯಲ್ಲಿ ಜಾರಿಯಲ್ಲಿದ್ದ ಶೇ. 4 ರಷ್ಟು ಮೀಸಲನ್ನು ರದ್ದುಗೊಳಿಸಿದ್ದ ಕರ್ನಾಟಕ ಸರ್ಕಾರ, ಮುಸ್ಲಿಂ ಸಮುದಾಯವನ್ನು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರ್ಪಡೆ ಮಾಡಿತ್ತು. ಸರ್ಕಾರದ ನಿರ್ಧಾರ ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ವರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಕೆ.ಎಂ ಜೋಸೆಫ್, ನ್ಯಾ.ಬಿ.ವಿ. ನಾಗರತ್ನ ಅವರಿದ್ದ ಪೀಠ, ಸರ್ಕಾರದ ಆದೇಶ ಬಗ್ಗೆ ಅಸಮಾಧಾನ ಹಾಗೂ ಕಳವಳ ವ್ಯಕ್ತಪಡಿಸಿದೆ.