ರಾಜ್ಯ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್!

ರಾಜ್ಯ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್!

ಬೆಂಗಳೂರು : ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರಿಂದ ಪದವಿ ಪೂರ್ವ ಕಾಲೇಜುಗಳ ಅರ್ಹ ಉಪನ್ಯಾಸಕರ ಹುದ್ದೆಗಳಿಗೆ ಮುಂಬಡ್ತಿಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳಲ್ಲಿ ಶೇ.75ರಷ್ಟು ನೇರ ನೇಮಕಾತಿ ಮೂಲಕ ಹಾಗೂ ಶೇ.25ರಷ್ಟು ಪ್ರೌಢಶಾಲಾ ಸಹಶಿಕ್ಷಕ ವೃಂದದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ಮೂಲಕ ನೇಮಕಾತಿ ಮಾಡಲು 2014ರ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

ಪ್ರೌಢಶಾಲಾ ಸಹಶಿಕ್ಷಕ ವೃಂದದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಲುವಾಗಿ ವಯೋನಿವೃತ್ತಿ, ರಾಜೀನಾಮೆ, ನಿಧನ ಹಾಗೂ ಇತರ ಕಾರಣಗಳಿಂದ ತೆರವಾದ ಬಗೆಗಿನ ಮಾಹಿತಿ ಅವಶ್ಯಕತ ಇರುವುದರಿಂದ, ಈ ಪತ್ರದೊಂದಿಗೆ ಲಗತ್ತಿಸಿರುವ ಅನುಬಂಧದಲ್ಲಿ ತಿಳಿಸಿರುವ ಮಾಹಿತಿಯನ್ನು ದಿನಾಂಕ:10-02-2023ರ ಸಂಜೆ 05-30ರ ಒಳಗಾಗಿ ಇಲಾಖಾ ಇ-ಮೇಲ್ ವಿಳಾಸ: preest2@gmail.com ಇಲ್ಲಿಗೆ excel sheet ನಲ್ಲಿ English ನಲ್ಲಿ ಮಾಹಿತಿಗಳನ್ನು ನಮೂದಿಸಿ ಸಲ್ಲಿಸಲು ತಿಳಿಸಿದ. ವಿಧಾನ ಪರಿಷತ್‌ ಪ್ರಶ್ನೆ ಆಗಿದ್ದು, ಜಿಲ್ಲಾ ಉಪನಿರ್ದೇಶಕರು ತಮ್ಮ ವೈಯಕ್ತಿಕ ಗಮನ ಹರಿಸಿ ಎಲ್ಲಾ ಕಾಲೇಜುಗಳಿಂದ ಮಾಹಿತಿಯನ್ನು ಕ್ರೋಢೀಕರಿಸಿ ಸಲ್ಲಿಸಲು ತಿಳಿಸಿದೆ.