ರಾಮನಗರದಲ್ಲಿ ಪುಂಡರ ಅಟ್ಟಹಾಸ : ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ

ರಾಮನಗರ : ರಾಮನಗರದಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದು, ಮಂಚನಬೆಲೆ ಜಲಾಶಯಕ್ಕೆ ತೆರಳಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಮೇಲೆ ಐವರು ಯುವಕರು ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಮಂಚನಬೆಲೆ ಡ್ಯಾಂಗೆ ತೆರಳಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಸೆಕ್ಯೂರಿಟಿ ಗಾರ್ಡ್ ನರಸಿಂಹಮೂರ್ತಿ ಎಂಬುವರ ಮೇಲೆ ಐವರು ಯುವಕರು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಡ್ಯಾಂ ವೀಕ್ಷಿಸಲು ಬಂದ ಐವರು ಯುವಕರಿಗೆ ಡ್ಯಾಂ ವೀಕ್ಷಣೆಗೆ ಅವಕಾಶ ನೀಡದ ಸೆಕ್ಯೂರಿಟಿ ಗಾರ್ಡ್ ನ ಮೂಗು, ಕಿವಿಯಲ್ಲಿ ರಕ್ತ ಬರುವಂತೆ ಯುವಕರು ಹಲ್ಲೆ ನಡೆಸಿದ್ದಾರೆ. ಸ್ಥಳೀಯರು ಮೂವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇಬ್ಬರು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.