ರಾಮನಗರದ ಮಾಜಿ ನಗರ ಸಭೆ ಅಧ್ಯಕ್ಷ ಸೇರಿ ಹಲವು ಮುಸ್ಲಿಂ ಮುಖಂಡರು 'ಜೆಡಿಎಸ್' ಸೇರ್ಪಡೆ

ರಾಮನಗರದ ಮಾಜಿ ನಗರ ಸಭೆ ಅಧ್ಯಕ್ಷ ಸೇರಿ ಹಲವು ಮುಸ್ಲಿಂ ಮುಖಂಡರು 'ಜೆಡಿಎಸ್' ಸೇರ್ಪಡೆ

ಬೆಂಗಳೂರು : ರಾಮನಗರದಲ್ಲಿ ನಗರ ಸಭೆ ಮಾಜಿ ಅಧ್ಯಕ್ಷ ಆರೀಫ್ ಖುರೇಸಿ ಸೇರಿ ಹಲವು ಮುಸ್ಲಿಂ ಮುಖಂಡರು ಇಂದು 'ಜೆಡಿಎಸ್' ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ರಾಮನಗರ ನಗರ ಸಭೆ ಮಾಜಿ ಅಧ್ಯಕ್ಷ ಆರೀಫ್ ಖುರೇಸಿ, ಮಾಜಿ ಕೌನ್ಸಿಲರ್ ಕೌಲೆಮಚ್ಚೆಬಾಬು ಸೇರಿದಂತೆ ಹಲವರು ಇಂದು ಮಾಜಿ ಸಿಎಂ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ವಿಚಾರದಲ್ಲಿ ಸುಳ್ಳು ಸುದ್ದಿ- ಅರುಣ್ ಸಿಂಗ್ ಸ್ಪಷ್ಟನೆ

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವವರ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಈಗ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸುಳ್ಳು ಸುದ್ದಿ ಪ್ರಕಟಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಾಟ್ಸಪ್ಗಳಲ್ಲಿ ತಪ್ಪು ಮಾಹಿತಿ ಹರಿದಾಡುತ್ತಿದೆ. ಸುಳ್ಳು ಸುದ್ದಿ ಪ್ರಕಟಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.ಸೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವಂತ 100 ಅಭ್ಯರ್ಥಿಗಳ ಬಿಜೆಪಿ ಮೊದಲ ಪಟ್ಟಿ ಫೇಕ್ ( Fake ). ಅದು ನಕಲಿಯಾಗಿದ್ದು. ನಿಜವಾದ ಲೀಸ್ಟ್ ಅಧಿಕೃತವಾಗಿ ಬಿಜೆಪಿಯಿಂದ ಏಪ್ರಿಲ್ 8ರಂದು ಇಲ್ಲವೇ ಆನಂತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಕಾದು ನೋಡಿ.