ರಾಹುಲ್ ಅನರ್ಹತೆಗೆ ಪ್ರತ್ಯುತ್ತರವಾಗಿ ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸಿ: ಪ್ರಿಯಾಂಕಾ

ರಾಹುಲ್ ಅನರ್ಹತೆಗೆ ಪ್ರತ್ಯುತ್ತರವಾಗಿ ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸಿ: ಪ್ರಿಯಾಂಕಾ

ವದೆಹಲಿ: ರಾಹುಲ್ ಗಾಂಧಿ ಅವರು ಲೋಕಸಭಾ ಸಂಸದರಾಗಿ ಅನರ್ಹಗೊಂಡಿದ್ದು ಕಾಂಗ್ರೆಸ್ ಗೆ ಭಾರಿ ಹಿನ್ನಡೆಯಾಗಿದೆ. ಇದರ ವಿರುದ್ಧ ಕಾಂಗ್ರೆಸ್ ದೇಶದಾದ್ಯಂತ ಹೋರಾಟ ನಡೆಸುತ್ತಿದೆ. ದೆಹಲಿಯಲ್ಲಿ ಶುಕ್ರವಾರ ಸಂಜೆ ಈ ವಿಷಯದ ಕುರಿತು ಕಾಂಗ್ರೆಸ್ ನಾಯಕರು ತುರ್ತು ಸಭೆ ನಡೆದಿದೆ.

ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಾರು ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ.

ಸಭೆಯಲ್ಲಿ ಉಪಸ್ಥಿತರಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಜೆಪಿಗೆ ತಕ್ಕ ಪ್ರತ್ಯುತ್ತರವಾಗಿ ಈ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವತ್ತ ಕಾಂಗ್ರೆಸ್ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಅವರ ಅನರ್ಹತೆಯನ್ನು ವಿರೋಧಿಸಿ ಕಾಂಗ್ರೆಸ್‌ ನ ಎಲ್ಲಾ ಸಂಸದರು ಸಾಮೂಹಿಕ ರಾಜೀನಾಮೆ ನೀಡಬಹುದು ಎಂದು ಸಂಸದರೊಬ್ಬರು ಸಲಹೆ ನೀಡಿದ್ದಾರೆ. ಎಎನ್‌ ಐ ಉಲ್ಲೇಖಿಸಿರುವ ಮೂಲಗಳ ಪ್ರಕಾರ, ಈ ವಿಷಯದಲ್ಲಿ ಮುಂದಿನ ಕ್ರಮದ ಬಗ್ಗೆ ಚರ್ಚಿಸಲು ಸಮಿತಿಯನ್ನು ರಚಿಸುವ ಸಾಧ್ಯತೆಯಿದೆ.

ಎಐಸಿಸಿ ಕಚೇರಿಯ ತುರ್ತು ಸಭೆಯಲ್ಲಿ ಸ್ಟೀರಿಂಗ್ ಕಮಿಟಿ, ಪಿಸಿಸಿ ಮುಖ್ಯಸ್ಥರು, ಸಿಎಲ್‌ ಪಿ ನಾಯಕರು ಮತ್ತು ಮುಂಭಾಗದ ಸಂಘಟನೆಗಳು, ಇಲಾಖೆಗಳು ಮತ್ತು ಕೋಶಗಳ ಮುಖ್ಯಸ್ಥರು ಹಾಜರಾಗಿದ್ದರು.

ಎಪ್ರಿಲ್- ಮೇ ನಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಇಂದು ಮೊದಲ ಪಟ್ಟಿ ಬಿಡುಗಡೆ ಮಾಡಿದೆ. 224 ಕ್ಷೇತ್ರಳ ಪೈಕಿ 124 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಲಾಗಿದೆ.